ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಡೆಂಗ್ಯೂ ವಿರೋಧಿ ಮಾಸಾಚರಣೆ

ಮುಲ್ಕಿ: ಮಳೆಗಾಲದ ಸಂದರ್ಭದಲ್ಲಿ ವಸತಿ ಸಂಕೀರ್ಣ, ಮನೆ, ಕಟ್ಟಡ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿ ಮಲೇರಿಯಾ, ಡೆಂಗ್ಯೂನಂತಹ ಮಾರಕ ರೋಗವು ಹರಡುವ ಸಾಧ್ಯತೆಯಿದ್ದು, ಸಾರ್ವಜನಿಕರು ಪರಿಸರವನ್ನು ಸ್ವಚ್ಛವಾಗಿರಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಭಂಡಾರಿ ಹೇಳಿದ್ದಾರೆ.

ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ತಾಲೂಕಿನ ಸಂಯುಕ್ತ ಆಶ್ರಯದಲ್ಲಿ ಮುಲ್ಕಿ ನ. ಪಂ. ನ ಸಹಯೋಗದಲ್ಲಿ ಮುಲ್ಕಿ ನಗರ ಪಂಚಾಯತ್‌ನ ಸಮುದಾಯ ಭವನದಲ್ಲಿ ಜರಗಿದ ತಾಲೂಕು ಮಟ್ಟದ ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನುಮುಲ್ಕಿ ತಾಲೂಕು ತಹಶೀಲ್ದಾರ್ ಕಮಲಮ್ಮ ವಹಿಸಿದ್ದರು. ಮುಲ್ಕಿ ನ.ಪಂ. ಮುಖ್ಯಾಧಿಕಾರಿ ಚಂದ್ರ ಪೂಜಾರಿ, ಉಪಾಧ್ಯಕ್ಷ ಸತೀಶ್ ಅಂಚನ್, ಸದಸ್ಯರಾದ ಮಂಜುನಾಥ ಕಂಬಾರ, ವಂದನಾ ಕಾಮತ್ ಮತ್ತಿತರರು ಉಪಸ್ತಿತರಿದ್ದರು. ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಪ್ರದೀಪ್ ಸ್ವಾಗತಿಸಿ, ನಿರೂಪಿಸಿದರು.

Edited By : Vijay Kumar
Kshetra Samachara

Kshetra Samachara

30/08/2021 11:11 pm

Cinque Terre

9.53 K

Cinque Terre

0

ಸಂಬಂಧಿತ ಸುದ್ದಿ