ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಮುದಾಯ ಆರೋಗ್ಯ ಸೇವೆಗೆ ಪ್ರತ್ಯೇಕ ಸಿಬ್ಬಂದಿ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಸಮುದಾಯ ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಿಬ್ಬಂದಿ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ‌ಯಲ್ಲಿ ಪ್ರತ್ಯೇಕ ವೃಂದ ರಚಿಸಬೇಕಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು ಅತ್ಯಾಧುನಿಕ ಜೀವ ರಕ್ಷಣಾ ವ್ಯವಸ್ಥೆ‌ಯನ್ನು ಒಳಗೊಂಡ 120 ಆಂಬ್ಯುಲೆನ್ಸ್‌ಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೇವೆಗಳಿಗೆ ಒಪ್ಪಿಸಿ ಬಳಿಕ ಮಾತನಾಡಿದರು.

ಮಕ್ಕಳ ಅಪೌಷ್ಟಿಕತೆ ದೇಶದ ದೊಡ್ಡ ಸಮಸ್ಯೆ‌ಯಾಗಿದೆ. ಇದನ್ನು ನಿರ್ವಹಿಸುವ ನಿಟ್ಟಿನಲ್ಲಿ ಸಮುದಾಯ ಆರೋಗ್ಯ ಸೇವೆಗೆ ಅಗತ್ಯ ಸಿಬ್ಬಂದಿ ಒದಗಿ‌ಸಬೇಕಾಗಿದೆ. ಇದಕ್ಕಾಗಿ ಸಮುದಾಯ ಆರೋಗ್ಯ ಸೇವೆಯ ಡಿಪ್ಲೊಮಾ ಕೋರ್ಸ್ ಆರಂಭಿಸಬೇಕಿದೆ ಎಂದು ಅವರು ಹೇಳಿದರು.

ಹಾಗೆಯೇ ಬೆಂಗಳೂರಿನ‌ಲ್ಲಿ ಒಂದೇ ಪ್ರಾಧಿಕಾರದ ಅಡಿಯಲ್ಲಿ ಆರೋಗ್ಯ ಸೇವೆಯನ್ನು ಒದಗಿಸಬೇಕಿದೆ. ಜನಸಾಂಧ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಗಮನ ಹರಿಸಲಾಗುವುದು ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

12/09/2021 08:19 pm

Cinque Terre

24.98 K

Cinque Terre

1

ಸಂಬಂಧಿತ ಸುದ್ದಿ