ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ವಕೀಲರ ಸಂಘದಿಂದ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ

ಉಡುಪಿ: ನಗರದ ವಕೀಲರ ಸಂಘ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಾಯಕ್ಸ್ ಗ್ರೂಪ್ ಸಹಯೋಗದಲ್ಲಿ ವಕೀಲರ ಸಂಘದ ಸದಸ್ಯರು ಮತ್ತು ಕುಟುಂಬ ಸದಸ್ಯರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ ಹಾಗೂ ವಿವಿಧ ಸೇವೆಗಳನ್ನು ಒದಗಿಸುವ ಕಾರ್ಯಕ್ರಮವು ಉಡುಪಿ ವಕೀಲರ ಸಂಘದ ಸಭಾಂಗಣದಲ್ಲಿ ಇಂದು ನಡೆಯಿತು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಅಧ್ಯಕ್ಷ ಸುಬ್ರಮಣ್ಯ ಜೆ. ಎನ್. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರೋಗ್ಯ ರಕ್ಷಣೆಗೆ ಬೇಕಾದ ಸೌಲಭ್ಯವನ್ನು ವಕೀಲರು ಮತ್ತು ಕುಟುಂಬ ಸದಸ್ಯರಿಗೆ ಒದಗಿಸುತ್ತಿರುವುದು ಶ್ಲಾಘನೀಯ. ಹಿಂದೆಲ್ಲಾ ಮನೆಯಿಂದ ಹೊರ ತೆರಳಿದರೂ ಸುರಕ್ಷಿತವಾಗಿ ಮನೆಗೆ ಮರಳುವ ಖಾತ್ರಿಯಿದ್ದರೆ ಇಂದು ಹೊರ ತೆರಳಬೇಕಾದರೆ ಗುರುತು ಪತ್ರ ಅಗತ್ಯವಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಅಶ್ವಿತಾ ವಿ. ಅಮೀನ್ ಪ್ರಾರ್ಥಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಸ್ವಾಗತಿಸಿದರು. ನ್ಯಾಯವಾದಿ ರಾಜಶೇಖರ ಶ್ಯಾಮರಾವ್ ನಿರೂಪಿಸಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿದರು.

Edited By : PublicNext Desk
Kshetra Samachara

Kshetra Samachara

15/09/2021 04:53 pm

Cinque Terre

4.67 K

Cinque Terre

0

ಸಂಬಂಧಿತ ಸುದ್ದಿ