ಉಡುಪಿ: ಇದೇ ಬರುವ 28-09-2021ರಂದು ಬಾರ್ಕೂರಿನ ಕಡೂರು ಶ್ರೀ ನಾಗೇಶ್ವರ ದೇವಸ್ಥಾನದ 'ಭಂಡಾರಿ ಸಭಾಂಗಣ'ದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ.ಕಡಂದಲೆ ಸುರೇಶ ಭಂಡಾರಿ ಫ್ಯಾಮಿಲಿ ಚಾರಿಟೇಬಲ್ ಟ್ರಸ್ಟ್ (ರಿ) ಮುಂಬಯಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಉಡುಪಿಯ ಪ್ರಖ್ಯಾತ ನೇತ್ರ ತಜ್ಞ ಡಾ| ಕೃಷ್ಣ ಪ್ರಸಾದ್ ಮತ್ತು ಅವರ ನುರಿತ ವೈದ್ಯರಿಂದ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ.
ಈ ಸಾಮಾಜಿಕ ಕಳಕಳಿಯ ಕಾರ್ಯಕ್ರಮದ ಉದ್ಘಾಟನೆ ಅಂದು ಬೆಳಿಗ್ಗೆ ನಡೆಯಲಿದ್ದು,ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಹಲವಾರು ಜನಪ್ರತಿನಿಧಿಗಳು, ಸಮಾಜ ಸೇವಕರು ಮತ್ತು ಸಮಾಜ ಸಂಘಟನೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಹೆಚ್ಚಿನ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಆಯೋಜಕರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
Kshetra Samachara
24/09/2021 11:56 am