ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಿಂದ ಆಯೋಜನೆಗೊಳ್ಳುವ ಮಂಗಳೂರು ದಸರಾ ಅ.7 ರಿಂದ ಅ.16ರವರೆಗೆ ನಡೆಯಲಿದೆ. ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಈ ಬಾರಿಯೂ 'ನಮ್ಮ ದಸರಾ ನಮ್ಮ ಸುರಕ್ಷೆ'ಯಡಿ ದೇವಳದ ಆಡಳಿತ ಮಂಡಳಿ ನಿರ್ಧರಿಸಿದೆ.
ಕೊರೊನಾ ಸೋಂಕನ್ನು ನಿಯಂತ್ರಣದ ಹಿನ್ನೆಲೆಯಲ್ಲಿ ಈ 10 ದಿನಗಳ ಕಾಲವೂ ಕುದ್ರೋಳಿ ಶ್ರೀಕ್ಷೇತ್ರದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಭಕ್ತಾದಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ. ಲಸಿಕೆ ಪಡೆಯದ ಭಕ್ತಾದಿಗಳು ಫಸ್ಟ್ ಡೋಸ್ ಹಾಗೂ ಸೆಕೆಂಡ್ ಡೋಸ್ ನೀಡಲು ವ್ಯವಸ್ಥೆ ಮಾಡಲಾಗಿದೆ. ದೇವಾಲಯಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸುವವರಿಗೆ ಮಾತ್ರ ಪ್ರವೇಶ ಇರಲಿದೆ. ಅಲ್ಲದೆ ದೇವಳದಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡೇ ದೇವರ ದರ್ಶನ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ.
ದಸರಾದ ಅಷ್ಟು ದಿನಗಳ ಕಾಲವೂ ದೇವಳದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಕೊನೆಯ ದಿನ ಶ್ರೀ ನವದುರ್ಗೆಯರ ಸಹಿತ ಶ್ರೀ ಶಾರದಾಮಾತೆ, ಶ್ರೀ ಮಹಾಗಣಪತಿ ದೇವರ ವಿಗ್ರಹಗಳನ್ನು ದೇವಾಲಯದ ಪುಷ್ಕರಣಿಯಲ್ಲಿ ಜಲಸ್ತಂಭನ ಮಾಡಲಾಗುತ್ತದೆ.
Kshetra Samachara
02/10/2021 06:54 pm