ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಕ್ಷಿಕೆರೆ: ಬೃಹತ್ ರಕ್ತದಾನ ಶಿಬಿರ

ಮುಲ್ಕಿ: ಪಕ್ಷಿಕೆರೆ ಸಂತ ಜೂದರ ಯಾತ್ರಿಕ ಕೇಂದ್ರದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಂತ ಜೂದರ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮಕ್ಕೆ ಚರ್ಚ್ ನ ಧರ್ಮಗುರುಗಳಾದ ಫಾ. ಮೆಲ್ವಿನ್ ಚಾಲನೆ ನೀಡಿ ಮಾತನಾಡಿ, ರಕ್ತದಾನದ ಮೂಲಕ ಮಾನವನ ಜೀವ ಉಳಿಸುವ ಕೆಲಸ ಶ್ಲಾಘನೀಯ ಎಂದರು.

ಮುಖ್ಯ ಅತಿಥಿಗಳಾಗಿ ಸಹಾಯಕ ಧರ್ಮಗುರು ಫಾ. ಸ್ಟ್ಯಾನಿ, ಕೆಮ್ರಾಲ್ ಗ್ರಾಪಂ ಉಪಾಧ್ಯಕ್ಷ ಸುರೇಶ್ ಪಂಜ, ಸದಸ್ಯರಾದ ಮಯ್ಯದ್ದಿ, ರೇವತಿ, ಜಾಕ್ಸನ್, ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಎಸ್ಟರ್, ಉದ್ಯಮಿ ಧನಂಜಯ ಶೆಟ್ಟಿಗಾರ್, ಪ್ರವೀಣ್ ಬೊಳ್ಳೂರು, ಕೆಮ್ರಾಲ್ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು. ಸುಮಾರು 87 ಮಂದಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

17/10/2021 06:59 pm

Cinque Terre

4.47 K

Cinque Terre

0

ಸಂಬಂಧಿತ ಸುದ್ದಿ