ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಪಡುಪಣಂಬೂರು ಗ್ರಾಮ ಪಂಚಾಯತ್ ಹಾಗೂ ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ಇಂಡಿಯನ್ ಕ್ಯಾನ್ಸರ್ ಸೋಸೈಟಿ ವತಿಯಿಂದ ಪಡುಪಣಂಬೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆರೋಗ್ಯ ತಪಾಸಣಾ ಶಿಬಿರ ಬುಧವಾರ ನಡೆಯಿತು.
ಶಿಬಿರವನ್ನು ಪಂಚಾಯತ್ ಅಧ್ಯಕ್ಷೆ ಮಂಜುಳಾ ಉದ್ಘಾಟಿಸಿ ಮಾತನಾಡಿ ಆರೋಗ್ಯವೇ ಭಾಗ್ಯ ಎಂಬಂತೆ ಗ್ರಾಮೀಣ ಪ್ರದೇಶದಲ್ಲಿ ಉಚಿತ ತಪಾಸಣಾ ಶಿಬಿರಗಳನ್ನು ಆಯೋಜಿಸುವ ಮೂಲಕ ಗ್ರಾಮದ ಅಭಿವೃದ್ಧಿಗೆ ಮುನ್ನುಡಿಯಾಗಲಿ ಎಂದರು.
ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಸದಸ್ಯರಾದ ಹೇಮನಾಥ, ಪುಷ್ಪ ಯಾನೆ ಶ್ವೇತ, ಪವಿತ್ರ, ಅನಿಲ್, ಪಂಚಾಯತ್ ಕಾರ್ಯದರ್ಶಿ ಲೋಕನಾಥ್ ಭಂಡಾರಿ,ಇಂಡಿಯನ್ ಕ್ಯಾನ್ಸರ್ ಸೋಸೈಟಿ ವೈದ್ಯರುಗಳಾದ ಡಾ.ಶೈಲಾ, ಡಾ. ರಶೀದ್,, ಕೆಮ್ರಾಲ್ ಆರೋಗ್ಯ ಸಹಾಯಕಿ ಮಾರ್ಗರೇಟ್ ಸುದರ್ಶನಿ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ತಪಾಸಣಾ ಶಿಬಿರ ನಡೆಯಿತು.
Kshetra Samachara
27/10/2021 01:01 pm