ಮುಲ್ಕಿ: ಕಿಲ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ನಾಯಿಗಳಿಗೆ ಉಚಿತ ಹುಚ್ಚುನಾಯಿ ರೋಗನಿರೋಧಕ ಲಸಿಕಾ ಶಿಬಿರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಪಂಚಾಯತ್ ಉಪಾಧ್ಯಕ್ಷ ಗೋಪಿನಾಥ ಪಡಂಗ ಮಾತನಾಡಿ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಾಣಿಗಳ ಆರೋಗ್ಯ ಸುರಕ್ಷತಾ ದೃಷ್ಟಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಗ್ರಾಮಸ್ಥರು ಅಭಿವೃದ್ಧಿಗೆ ಸಹಕರಿಸಬೇಕು ಎಂದು ವಿನಂತಿಸಿದರು.
ಕಿಲ್ಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಮುಲ್ಕಿ ಪಶುವೈದ್ಯಾಧಿಕಾರಿ ಡಾ. ನಾಗರಾಜ್, ಜಾನುವಾರು ಅಧಿಕಾರಿ ಸಂಪತ್ ಕುಮಾರ್, ರಂಗನಾಥ, ಪಂಚಾಯತ್ ಸಿಬ್ಬಂದಿ ಸುರೇಶ್, ರಮೇಶ್, ತಾರಾನಾಥ ,ಯತೀಶ್ ಮತ್ತಿತರರು ಉಪಸ್ಥಿತರಿದ್ದರು.
ಕಿಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಲ್ಪಾಡಿ,ಕೆಂಪು ಗುಡ್ಡೆ, ಕೆಂಚನಕೆರೆ, ಕೆರೆಕಾಡು ಯುನಾನಿ ಆಸ್ಪತ್ರೆ ವಠಾರದಲ್ಲಿ ನಾಯಿಗಳಿಗೆ ಉಚಿತ ಲಸಿಕಾ ಶಿಬಿರ ನಡೆಯಿತು.
Kshetra Samachara
28/10/2021 12:30 pm