ಉಡುಪಿ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳು ಹಲವು ಕಡೆ ಭೇಟಿ ನೀಡಲಿದ್ದಾರೆ.
ನಿನ್ನೆ ರಾತ್ರಿ ಆಗಮಿಸಿದ ನ್ಯಾಯಮೂರ್ತಿಗಳನ್ನು ಜಿಲ್ಲಾಡಳಿತ ಗೌರವಪೂರ್ವಕ ಸ್ವಾಗತ ನೀಡಿತು. ಇಂದು ಬೆಳಿಗ್ಗೆ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಲಸಿಕಾ ಕೇಂದ್ರಕ್ಕೆ ಲೋಕಾಯುಕ್ತರು ಮೊದಲ ಭೇಟಿ ನೀಡಿದರು. ಆಸ್ಪತ್ರೆಯ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದ ಅವರು, ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಜಿಲ್ಲಾ ಆರೋಗ್ಯಾಧಿಕಾರಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
16/11/2021 12:25 pm