ಉಡುಪಿ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಇವತ್ತು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳು ಹಲವು ಕಡೆ ಭೇಟಿ ನೀಡಲಿದ್ದಾರೆ. ಮೊದಲು ಲಸಿಕೆ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಬಳಿಕ ಬೋರ್ಡ್ ಹೈಸ್ಕೂಲ್ ಗೆ ಭೇಟಿ ನೀಡಿದರು.
ನಂತರ ಐಬಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ನ್ಯಾಯಮೂರ್ತಿ, ನನ್ನ ಪ್ರವಾಸದ ಪ್ರಮುಖ ಉದ್ದೇಶ ಲಸಿಕೆ ಮತ್ತು ಕೋವಿಡ್ ನಿಯಮಾವಳಿ ಪಾಲನೆ ಬಗ್ಗೆ ತಿಳಿದುಕೊಳ್ಳುವುದಾಗಿದೆ. ಕೊರೊನಾ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ್ದೇನೆ.
ವಿದ್ಯಾಸಂಸ್ಥೆಗಳಲ್ಲಿ ಕೋವಿಡ್ ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸುವಂತೆ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಜ್ಯದ ಒಬ್ಬನೇ ಒಬ್ಬ ವಿದ್ಯಾರ್ಥಿಗೂ ತೊಂದರೆಯಾಗಬಾರದು ಎಂದರು.
ಶೇ.100ರಷ್ಟು ಮೊದಲ ಮತ್ತು ಎರಡನೇ ಡೋಸ್ ಲಸಿಕೆ ಆಗಬೇಕು. ಲೋಕಾಯುಕ್ತ ಪೊಲೀಸರಿಗೂ ಸೂಚನೆ ನೀಡಿದ್ದೇನೆ. ಎಲ್ಲ ವಿದ್ಯಾಸಂಸ್ಥೆಗಳಿಗೂ ಭೇಟಿ ನೀಡಿ ಶಾಲೆ- ಕಾಲೇಜು ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಯಾವುದೇ ಮಕ್ಕಳಿಗೂ ಸಮಸ್ಯೆಯಾಗಬಾರದು ಎಂದು ಹೇಳಿದರು.
Kshetra Samachara
16/11/2021 03:26 pm