ಮಂಗಳೂರು: ಪ್ರಕೃತಿದತ್ತ ಮಾನವ ದೇಹದ ದೈಹಿಕ ನ್ಯೂನತೆ ಶಮನ ಮಾಡಲು ಪ್ರಕೃತಿ ಒಲಿದರೆ ಮಾತ್ರ ಸಾಧ್ಯ. ಇಂತಹ ದೈವತ್ವ ಸಾಕ್ಷಾತ್ಕರಿಸುವ ಕಾರ್ಯವನ್ನು ಆಯುಷ್ ವೆನ್ಲಾಕ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಕೃತಿ ಚಿಕಿತ್ಸಾ ಕೇಂದ್ರ ಮಾಡುತ್ತಿರುವುದು ಶ್ಲಾಘನೀಯ ಎಂದು ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾ ಪ್ರಸಾದ್ ಹೇಳಿದರು.
ರಾಷ್ಟ್ರೀಯ ಪ್ರಕೃತಿ ದಿನಾಚರಣೆ- 2021ರ ಅಂಗವಾಗಿ ನಗರದ ವೆನ್ಲಾಕ್ ಆಯುಷ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರಕಾರಿ ವ್ಯವಸ್ಥೆಯಲ್ಲಿ ಬಹುಪಯೋಗಿ ಸಾರ್ವಜನಿಕ ಪ್ರಕೃತಿ ಚಿಕಿತ್ಸಾ ಆರೋಗ್ಯ ವ್ಯವಸ್ಥೆ ಸದೃಢಗೊಳಿಸಿದ ಕೀರ್ತಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಹಾಗೂ ಅವರ ತಂಡಕ್ಕೆ ಸಲ್ಲುತ್ತದೆ ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಮಾತನಾಡಿ, ಆಯುಷ್ ಹಾಗೂ ಪ್ರಕೃತಿ ಚಿಕಿತ್ಸೆ ಔಷಧಿ ರಹಿತವಾದರೂ ಪರಿಣಾಮಕಾರಿಯಾಗಿದ್ದು, ಈ ಚಿಕಿತ್ಸೆಗೆ ಜನರಿಂದ ಹೆಚ್ಚಿನ ಬೇಡಿಕೆಯಿದೆ. ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಖಾಸಗಿ ಆಯುಷ್ ಕಾಲೇಜುಗಳ ಸಹಯೋಗದೊಂದಿಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
Kshetra Samachara
19/11/2021 10:37 pm