ಉಡುಪಿ : ನಗರದ ಆದಿಉಡುಪಿ ಬಳಿಯ ಕರಾವಳಿ ಬೈಪಾಸ್ ನಲ್ಲಿ ಮಾನಸಿಕ ಅಸ್ವಸ್ಥ ಯುವಕನ ರಂಪಾಟಕ್ಕೆ ಬೆದರಿದ ಸಾರ್ವಜನಿಕರು ಕೈ- ಕಾಲು ಕಟ್ಟಿ ಹಾಕಿದ ಘಟನೆ ನಡೆದಿದೆ.
ಯುವಕನ ಹೆಸರು ಸೋಮೇಶ್(27), ಈತ ಹುಬ್ಬಳ್ಳಿ ಮೂಲದವನಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಯುವಕ ಭಯದ ವಾತಾವರಣ ಸೃಷ್ಟಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿ ಪಡಿಸುತ್ತಿದ್ದ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಅವಘಡ ನಡೆಯದಂತೆ ಈತನ ಕೈ ಕಾಲು ಕಟ್ಟಿ ಹಾಕಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗೂ ವಿಶು ಶೆಟ್ಟಿ ಅಂಬಲಪಾಡಿ ಅವರು ಯುವಕನನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಸಂಬಂಧಪಟ್ಟವರು ಜಿಲ್ಲಾಸ್ಪತ್ರೆ ಸಂಪರ್ಕಿಸುವಂತೆ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಹಾವಂಜೆ ಪಂಚಾಯತ್ ಸದಸ್ಯ ಸಹಕರಿಸಿದರು.
Kshetra Samachara
20/11/2021 01:15 pm