ಪುತ್ತೂರು: ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ನೀಡುವುದರ ಜತೆಗೆ ಸಾರ್ವಜನಿಕರು ಹಾಗೂ ವೈದ್ಯರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ವೈದ್ಯರು ಹಾಗೂ ಸಿಬ್ಬಂದಿಗೆ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ತರಬೇತಿ ನೀಡಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಸುರೇಶ್ ಕುಡ್ವ ತಿಳಿಸಿದ್ದಾರೆ.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೈದ್ಯರಲ್ಲಿ ನಿರಂತರ ಕಲಿಕಾ ಕಾರ್ಯಕ್ರಮ ಹಮ್ಮಿಕೊಂಡು, ಆ ಮೂಲಕ ನೂತನ ಆವಿಷ್ಕಾರಗಳ ಜ್ಞಾನ ಪಡೆದುಕೊಳ್ಳುವುದಲ್ಲದೆ, ಸಾರ್ವಜನಿಕರಿಗೆ ಉತ್ತಮ ಆರೋಗ್ಯಕ್ಕಾಗಿ ಉತ್ತಮ ಚಿಕಿತ್ಸಾ ಸೌಲಭ್ಯ ನೀಡುವುದು ಐಎಂಎಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
Kshetra Samachara
22/11/2021 10:22 am