ಉಡುಪಿ: ಲೊಂಬಾರ್ಡ್ ಮೆಮೋರಿಯಲ್ (ಮಿಷನ್) ಹಾಸ್ಪಿಟಲ್, ಉಡುಪಿಯಲ್ಲಿ "ಆಕ್ಸಿಜನ್ ಜನರೇಟರ್ ಪ್ಲಾಂಟ್" ನಿರ್ಮಿಸಲಾಗಿದ್ದು, ಖಾಸಗಿ ಆಸ್ಪತ್ರೆಯ ಪ್ರಥಮ ಆಕ್ಸಿಜನ್ ಜನರೇಟರ್ ಪ್ಲಾಂಟ್ ಇದಾಗಿದೆ. ಇಂದು ಶಾಸಕರಾದ ಕೆ. ರಘುಪತಿ ಭಟ್ ರವರು ಭೇಟಿ ನೀಡಿ ವೀಕ್ಷಿಸಿದರು.
ಶಾಸಕರು ಇದನ್ನು ಕೊಡುಗೆಯಾಗಿ ನೀಡಿದ ಅಜಿಮ್ ಪ್ರೇಮ್ಜಿ ಫೌಂಡೇಶನ್ ಹಾಗೂ ಮಿಷನ್ ಆಸ್ಪತ್ರೆಯ ಆಡಳಿತ ಮಂಡಳಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಲೊಂಬಾರ್ಡ್ ಮೆಮೋರಿಯಲ್ ಹಾಸ್ಪಿಟಲ್ ನಿರ್ದೇಶಕರಾದ ಡಾ. ಸುಶೀಲ್ ಜತನ, ವ್ಯವಸ್ಥಾಪಕರಾದ ಸದಾನಂದ, ಆಡಳಿತಾಧಿಕಾರಿಗಳಾದ ದೀನಾ, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Kshetra Samachara
06/12/2021 02:33 pm