ಮುಲ್ಕಿ: ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘ (ರಿ), ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ ಕಟೀಲು ಹಾಗೂ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸಾಯನ್ಸ್ ಜಂಟಿ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ, ದಂತ ಚಿಕಿತ್ಸಾ ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರ ಲಾಯಲ್ಟಿ ಕಾರ್ಡ್ ನೊಂದಾವಣೆ ಶಿಬಿರ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷರಾದ ರಮೇಶ್ ಅಮೀನ್ ದೀಪಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭ ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಕಮಲಾಕ್ಷ ಬಡಗಿತ್ಲು ಕೋಶಾಧಿಕಾರಿ ಪ್ರಕಾಶ್ ಸುವರ್ಣ, ಕಟ್ಟಡ ಸಮಿತಿ ಅಧ್ಯಕ್ಷ ವಿಠಲ ಅಮೀನ್, ಉಪಾಧ್ಯಕ್ಷೆ ಸರೋಜಿನಿ ಸುವರ್ಣ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು
Kshetra Samachara
18/12/2021 10:53 am