ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಕೋವಿಡ್ ಮೂರನೆಯ ಅಲೆ ಬಗ್ಗೆ ಎಚ್ಚರವಹಿಸಿ

ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಹಾಗೂ ಸಿಬ್ಬಂದಿಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಆರೋಗ್ಯ ತಪಾಸಣೆ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮುಲ್ಕಿ ನಪಂ ಮುಖ್ಯಾಧಿಕಾರಿ ಚಂದ್ರಪೂಜಾರಿ ಮಾತನಾಡಿ ಪೌರಕಾರ್ಮಿಕರು ಊರಿನ ರಾಯಭಾರಿಗಳಾಗಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ನಗರ ಪಂಚಾಯತ್ ಪೌರಕಾರ್ಮಿಕರ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕೊರೋನಾ ಬಗ್ಗೆ ಮತ್ತಷ್ಟು ಎಚ್ಚರಿಕೆ ವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಲು ವಿನಂತಿಸಿದರು.

ಕೆಮ್ರಾಲ್ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಿತ್ರ ಮಾತನಾಡಿ ಮುಂದಿನ ದಿನಗಳಲ್ಲಿ ಕೊರೋನಾ ಮೂರನೇ ಅಲೆ ಬಗ್ಗೆ ಜಾಗೃತರಾಗಬೇಕು. ಮಕ್ಕಳಿಗೆ ಸೋಮವಾರದಿಂದ ಕೊರೋನಾ ಲಸಿಕೆ ನೀಡಲು ಪ್ರಾರಂಭವಾಗಲಿದ್ದು ಲಸಿಕೆ ಬಗ್ಗೆ ಯಾರು ಭಯಪಡುವ ಅಗತ್ಯವಿಲ್ಲ ಎಂದರು.

ಈ ಸಂದರ್ಭ ಮುಲ್ಕಿ ನಪಂ ಸದಸ್ಯ ಪುತ್ತುಬಾವ, ಆರೋಗ್ಯಾಧಿಕಾರಿ ರಾಜೇಶ್, ಸಿಬ್ಬಂದಿ ಮತ್ತಾಡಿ, ಅಶೋಕ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.ಬಳಿಕ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು.

Edited By : Manjunath H D
Kshetra Samachara

Kshetra Samachara

01/01/2022 02:05 pm

Cinque Terre

5.87 K

Cinque Terre

0

ಸಂಬಂಧಿತ ಸುದ್ದಿ