ಕಾರ್ಕಳ: ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ರೋಟರಿ ಕ್ಲಬ್ ರಾಕ್ ಸಿಟಿ ಕಾರ್ಕಳ ಇದರ ಸಹಯೋಗದೊಂದಿಗೆ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ಇದರ ಆಶ್ರಯದಲ್ಲಿ ಕಾರ್ಕಳ ತಾಲೂಕಿನ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಉಚಿತ ವೈದ್ಯಕೀಯ, ಕಣ್ಣಿನ ತಪಾಸಣಾ ಶಿಬಿರ, ರಕ್ತ ತಪಾಸಣಾ ಶಿಬಿರವು ಕಾರ್ಕಳದ ಟಿಎಂಎ ಪೈ ರೋಟರಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ರೋಟರಿ ಕ್ಲಬ್ ರೋಕ್ ಸಿಟಿ ಕಾರ್ಕಳ ಇದರ ಅಧ್ಯಕ್ಷ ಪ್ರಕಾಶ್ ಪೈ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಶರೀಫ್ ವಹಿಸಿದ್ದರು. ವೇದಿಕೆಯಲ್ಲಿ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಇದರ ಅಸೋಸಿಯೇಟ್ ಮ್ಯಾನೇಜರ್ ನಟೇಶ್ ಎ, ರೋಟರಿ ಕ್ಲಬ್ ಕಾರ್ಯದರ್ಶಿ ಗಣೇಶ್ ಬರ್ಲಾಯ, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೃಷ್ಣ ನಾಯ್ಕ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರ ರಕ್ತ ತಪಾಸಣೆ, ಲಿವರ್ ಫಂಕ್ಷನ್ ಟೆಸ್ಟ್, ಕಿಡ್ನಿ ಫಂಕ್ಷನ್ ಟೆಸ್ಟ್, ಥೈರಾಯ್ಡ್ ಟೆಸ್ಟ್, ಲಿಪಿಡ್ ಪ್ರೊಫೈಲ್ ಟೆಸ್ಟ್, ಮೂತ್ರ ಪರೀಕ್ಷೆ, ಕಣ್ಣು, ಕಿವಿ, ಮೂಗು, ಗಂಟಲು ಟೆಸ್ಟ್, ಇ ಸಿ ಜಿ , ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ತಪಾಸಣೆ ನಡೆಸಲಾಯಿತು.
Kshetra Samachara
08/01/2022 05:03 pm