ಉಡುಪಿ: ವಿವಿಧ ಕಾರಣಗಳಿಂದ ನೊಂದಿರುವ ಮಹಿಳೆಯರು ತಮ್ಮ ಸಮಸ್ಯೆಗಳ ಬಗ್ಗೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಉಚಿತ ದೂರವಾಣಿ ಸಂಖ್ಯೆ 181ನ್ನು ಸಂಪರ್ಕಿಸಿ ತಮ್ಮ ದೂರುಗಳನ್ನು ಸಲ್ಲಿಸಿ, ಅಗತ್ಯ ನೆರವು ಪಡೆಯು ವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನೊಂದ ಮಹಿಳೆಯರ ಪ್ರಕರಣಗಳನ್ನು ಇತ್ಯರ್ಥಪಡಿಸಲು ‘ಸಖಿ ಒನ್ ಸ್ಟಾಪ್ ಸೆಂಟರ್’ ಮತ್ತು ‘ಸಾಂತ್ವನ ಕೇಂದ್ರ’ ಗಳು ಕಾರ್ಯನಿರ್ವ ಹಿಸುತ್ತಿದ್ದು, ಮಹಿಳೆಯರು ತುರ್ತು ಸಂದರ್ಭಗಳಲ್ಲಿ ಉಚಿತ ಸಹಾಯವಾಣಿ 181ನ್ನು ಸಂಪರ್ಕಿಸಬಹುದು ಎಂದರು.
ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿ ರಚಿಸು ವುದು ಕಡ್ಡಾಯವಾಗಿದ್ದು, ಇದುವರೆಗೆ ಸಮಿತಿ ರಚಿಸದ ಇಲಾಖೆಗಳು ಮತ್ತು ಸಂಸ್ಥೆಗಳ ವರದಿ ಪಡೆದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಗಳು ಉಪಸ್ಥಿತರಿದ್ದರು.
Kshetra Samachara
08/01/2022 08:20 pm