ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ರವಾನೆ

ಮಂಗಳೂರು: ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯ ಅಂಗಾಂಗವನ್ನು ನಗರದ ಎ.ಜೆ. ಆಸ್ಪತ್ರೆಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ರವಾನಿಸಲಾಯಿತು.

ಕೇರಳ ರಾಜ್ಯದ ಕಣ್ಣೂರು ನಿವಾಸಿ ಕೆ.ವಿ.ರಮೇಶ್ (55) ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಮೃತಟ್ಟವರು‌‌. ಮೃತಪಟ್ಟ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡಲು ಪತ್ನಿ ಮತ್ತು ಕುಟುಂಬಸ್ಥರು ಒಪ್ಪಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಂಗಾಂಗ ದಾನದ ಪ್ರಕ್ರಿಯೆ ನಡೆದಿದೆ.

ಮೃತರ ಲಿವರ್ ಅನ್ನು ಝಿರೋ ಟ್ರಾಫಿಕ್‌ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೊಂಡೊಯ್ಯಲಾಯಿತು. ಅಲ್ಲಿಂದ ಬೆಂಗಳೂರಿಗೆ ತೆರಳುವ ಇಂಡಿಗೋ ವಿಮಾನದ ಮೂಲಕ ಲಿವರ್ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ರವಾನೆಯಾಯಿತು. ಮೃತರ ಕಿಡ್ನಿ ಹಾಗೂ ಕಣ್ಣುಗಳನ್ನು ಕೆಎಂಸಿ ಮಣಿಪಾಲ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Edited By : Nagesh Gaonkar
PublicNext

PublicNext

19/02/2022 07:47 am

Cinque Terre

45.95 K

Cinque Terre

3

ಸಂಬಂಧಿತ ಸುದ್ದಿ