ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು ಪ್ರಗತಿ‌ ಆಸ್ಪತ್ರೆಗೆ ಅತ್ಯಾಧುನಿಕ ಸಿಟಿ ಸ್ಕ್ಯಾನ್ ಯಂತ್ರ ಹಸ್ತಾಂತರಿಸಿದ ಡಾ.ಡಿ.ವೀರೇಂದ್ರ ಹೆಗಡೆ

ಪುತ್ತೂರು: ಹಲವು ರೋಗಗಳನ್ನು ಪ್ರಾರಂಭದಿಂದಲೇ ಪತ್ತೆ ಹಚ್ಚಲು ಸಹಕಾರಿಯಾಗುವ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನೀಡಲಾದ ಆಧುನಿಕ ಸಿಟಿ ಸ್ಕ್ಯಾನ್ ಯಂತ್ರವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗಡೆ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಹಸ್ತಾಂತರಿಸಿದರು.

ಸುಮಾರು ಎರಡು ಕೋಟಿ ವೆಚ್ಚದ ಈ ಯಂತ್ರ ಪುತ್ತೂರು ಹಾಗೂ ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಡಾ. ಡಿ.ವೀರೇಂದ್ರ ಹೆಗಡೆ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದು, ಸಂಪೂರ್ಣ ಸುರಕ್ಷಾ ವಿಮೆ ಯೋಜನೆಯನ್ನೂ ಆರಂಭಿಸಿದೆ. ಈಗಾಗಲೇ 7.85 ಲಕ್ಷ ಜನ ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ರಾಜ್ಯದ ಸುಮಾರು 642 ಆಸ್ಪತ್ರೆಗಳಲ್ಲಿ ವಿಮಾ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಕ್ಷೇತ್ರದ ವತಿಯಿಂದ ನಾಲ್ಕು ಇಂಥಹ ಅತ್ಯಾಧುನಿಕ ಸಿಟಿ ಸ್ಕ್ಯಾನ್ ಯಂತ್ರವನ್ನು ವಿತರಿಸಲಾಗುತ್ತಿದ್ದು, ಇನ್ನುಳಿದ ಮೂರನ್ನು ಕಾಸರಗೋಡು, ಚೆನ್ನರಾಯನಪಟ್ಟಣ ಮತ್ತು ಎಸ್.ಡಿ.ಎಮ್ ಆಸ್ಪತ್ರೆಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Edited By : Shivu K
Kshetra Samachara

Kshetra Samachara

30/03/2022 02:48 pm

Cinque Terre

18.25 K

Cinque Terre

0

ಸಂಬಂಧಿತ ಸುದ್ದಿ