ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಆಯುಷ್ ವಿಭಾಗ ಉಡುಪಿ, ರೋಟರಿ ಮಿಡ್ ಟೌನ್ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದು ಜಿಲ್ಲಾಸ್ಪತ್ರೆ ಆವರಣದಲ್ಲಿ "ಉಡುಪಿ ತಾಲೂಕು ಮಟ್ಟದ ಬೃಹತ್ ಆರೋಗ್ಯ ಮೇಳ" ಆಯೋಜಿಸಲಾಗಿತ್ತು.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೇಳ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ. ರಘುಪತಿ ಭಟ್ ಶುಭಹಾರೈಸಿ ಸಾರ್ವಜನಿಕರು ಆರೋಗ್ಯ ಮೇಳದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.
Kshetra Samachara
23/04/2022 11:34 am