ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಆಸ್ಪತ್ರೆ ಸರಕಾರದ ವಶಕ್ಕೆ: ಅಧಿಕೃತ ಆದೇಶ

ಉಡುಪಿ : ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ರಾಜ್ಯ ಸರಕಾರ ತನ್ನ ವಶಕ್ಕೆ ಪಡೆದು ಅಧಿಕೃತ ಸರಕಾರಿ ಆದೇಶವನ್ನು ಹೊರಡಿಸಿದೆ.

ಸಚಿವ ಸಂಪುಟ ಸಭೆಯ ನಿರ್ಣಯದಂತೆ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇದರ ನಿರ್ವಹಣೆಯನ್ನು ಸರಕಾರದ ಸುಪರ್ದಿಗೆ ಪಡೆದು ಅಧಿಕೃತ ಸರಕಾರಿ ಆದೇಶ ಹೊರಬಿದ್ದಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿರುವ ಉಡುಪಿಯಲ್ಲಿರುವ 4 ಎಕರೆ ಜಮೀನನ್ನು ವಶಕ್ಕೆ ಪಡೆಯಲಾಗಿದ್ದು, ಆಸ್ಪತ್ರೆಯ ಸಂಪೂರ್ಣ ನಿರ್ವಹಣೆ ಹಾಗೂ ಇತರ ಜವಾಬ್ದಾರಿಗಳನ್ನೂ ಸರ್ಕಾರ ವಹಿಸಿಕೊಂಡಿದೆ.

ಆಸ್ಪತ್ರೆಯ ವಾರ್ಷಿಕ ನಿರ್ವಹಣಾ ವೆಚ್ಚ ₹ 7 ಕೋಟಿ ಹಾಗೂ ಅವಶ್ಯವಿರುವ ಮಾನವ ಸಂಪನ್ಮೂಲಗಳಿಗೆ ಆವರ್ತಕ ವೆಚ್ಚವಾಗಿ ವಾರ್ಷಿಕ ₹ 2.83 ಕೋಟಿ ಸೇರಿ ₹ 9.83 ಕೋಟಿ ಅನುದಾನವನ್ನು ಸರಕಾರದಿಂದ ಭರಿಸಲು ನಿರ್ಧರಿಸಿದೆ. ಜತೆಗೆ, ಆಸ್ಪತ್ರೆಗೆ ಅಗತ್ಯವಾಗಿರುವ ಹುದ್ದೆಗಳನ್ನು ಸರ್ಕಾರದಿಂದಲೇ ಭರ್ತಿ ಮಾಡುವ ಬಗ್ಗೆಯೂ ಉಲ್ಲೇಖಿಸಿದೆ.

Edited By : PublicNext Desk
Kshetra Samachara

Kshetra Samachara

05/05/2022 09:38 pm

Cinque Terre

10.55 K

Cinque Terre

1

ಸಂಬಂಧಿತ ಸುದ್ದಿ