ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕಡಬ ಸಮುದಾಯ ಆಸ್ಪತ್ರೆ ಸಿಬ್ಬಂದಿ ಎಡವಟ್ಟು; ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದ್ದೇನು?

ಮಂಗಳೂರು: ಬೈಕ್‌ ಅಪಘಾತವೊಂದರಲ್ಲಿ ಗಾಯಾಳುವಿನ ಗಾಯದೊಳಗಿನ ಕಲ್ಲು-ಮಣ್ಣನ್ನು ಶುಚಿಗೊಳಿಸದೆ ಗಾಯಕ್ಕೆ ಹೊಲಿಗೆ ಹಾಕಿರುವ ಕಡಬದ ಸಮುದಾಯ ಆಸ್ಪತ್ರೆ ಸಿಬ್ಬಂದಿಯ ಎಡವಟ್ಟು ಪ್ರಕರಣದ ಬಗ್ಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ಎಂ. ಹೇಳಿಕೆ ನೀಡಿದ್ದಾರೆ.

ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳೊಂದಿಗೆ ನಾನು ಈ ಬಗ್ಗೆ ಮಾತನಾಡಿದ್ದೇನೆ. ಅವರ ಪ್ರಕಾರ ಅಪಘಾತಕ್ಕೊಳಗಾದ ಗಾಯಾಳುವಿಗೆ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಿ ಖಾಸಗಿ ವೈದ್ಯರಲ್ಲಿಗೆ ಹೋಗುವಂತೆ ಸೂಚನೆ ನೀಡಿದ್ದರು. ಆದರೆ ಆ ಗಾಯಾಳು ಈ ಸೂಚನೆಯನ್ನು ಪಾಲಿಸದೆ ಮನೆಗೆ ತೆರಳಿದ್ದಾರೆ‌. ಆದರೆ ನಾಲ್ಕೈದು ದಿನಗಳ ಬಳಿಕ ಗಾಯ ಉಲ್ಬಣಗೊಂಡು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ವೈದ್ಯರನ್ನು ಭೇಟಿಯಾಗಿದ್ದಾರೆ ಎಂದರು.

ಅಲ್ಲಿ ಎಕ್ಸರೇ ಮಾಡಿ ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಗಾಯವಿರುವ ಭಾಗದಲ್ಲಿ ಕಲ್ಲು ಹಾಗೂ ಮಣ್ಣಿನ ಕಣಗಳು ಇದ್ದು, ಅಲರ್ಜಿ ಆಗಿರೋದು ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದೊಂದು ಅಲ್ಲಿನ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯತನವೆಂದು ಕಂಡು ಬರುತ್ತದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೆ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕೆಂದು ಕೇಳಿಕೊಂಡಿದ್ದೇನೆ. ಪ್ರಕರಣದಲ್ಲಿ ನಿರ್ಲಕ್ಷ್ಯವಾಗಿರೋದು ಹೌದಾದಲ್ಲಿ ಸಂಬಂಧಪಟ್ಟವರ ಮೇಲೆ ಖಂಡಿತವಾಗಿಯೂ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಡಾ.ಕಿಶೋರ್ ಕುಮಾರ್ ಹೇಳಿದರು.

Edited By : Nagesh Gaonkar
Kshetra Samachara

Kshetra Samachara

06/05/2022 08:04 pm

Cinque Terre

18.5 K

Cinque Terre

1