ಮಂಗಳೂರು: ಉಸಿರಾಟದ ತೊಂದರೆಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಇಂದು ಸಣ್ಣಮಟ್ಟಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸದ್ಯ ಐಸಿಯುನಲ್ಲಿರುವ ಸುಕ್ರಿ ಬೊಮ್ಮಗೌಡ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಮೂಲಗಳ ಪ್ರಕಾರ 86 ವರ್ಷದ ಸುಕ್ರಿ ಬೊಮ್ಮಗೌಡ ಅವರು 3-4 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೃತಕ ಉಸಿರಾಟದಲ್ಲಿದ್ದರು. ಆದರೆ ಕಳೆದ ನಾಲ್ಕು ದಿನಗಳಿಂದ ಈ ಕೃತಕ ಉಸಿರಾಟ ಉಪಕರಣ ಇದ್ದರೂ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಿನ್ನೆ ಅವರಿಗೆ ತಂತು ಚಿಕಿತ್ಸೆ ಮಾಡಲಾಗಿತ್ತು. ಆದರೆ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿರುವ ಸುಕ್ರಿ ಬೊಮ್ಮಗೌಡ ಅವರಿಗೆ ಇಂದು ಸಣ್ಣಮಟ್ಟಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದೀಗ ಐಸಿಯುನಲ್ಲಿರುವ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Kshetra Samachara
08/05/2022 02:37 pm