ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಗುಣಮುಖರಾದ ಪದ್ಮಶ್ರೀ ಸುಕ್ರಜ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್: ಅಂಕೋಲದತ್ತ ಪಯಣ

ಮಂಗಳೂರು: ಉಸಿರಾಟದ ತೊಂದರೆಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ, ಮರಳಿ ತಮ್ಮ ಊರಾದ ಅಂಕೋಲದತ್ತ ಪಯಣಿಸಿದ್ದಾರೆ.

ಪದ್ಮಶ್ರೀ ಹಾಲಕ್ಕಿ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ಉಸಿರಾಟದ ತೊಂದರೆಯಿಂದ 6 ದಿನಗಳ ಹಿಂದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಅಂದು ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ತಂತು ಶಸ್ತ್ರ ಚಿಕಿತ್ಸೆ ಮತ್ತು ಸಣ್ಣ ಮಟ್ಟಿನ ಹೃದಯದ ಚಿಕಿತ್ಸೆ ಕೂಡ ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಅವರನ್ನು ಎರಡು ದಿನಗಳ ಹಿಂದೆ ವಾರ್ಡ್​ಗೆ ಶಿಫ್ಟ್​​ ಮಾಡಲಾಗಿತ್ತು.

ಇದೀಗ ಗುಣಮುಖರಾದ ಸುಕ್ರಿ ಬೊಮ್ಮಗೌಡ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಅವರನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಕ್ಕೆ ಮೂಲತ್ವ ಫೌಂಡೇಶನ್​ನ ಪ್ರಕಾಶ್ ಕೋಟ್ಯಾನ್, ಕಲ್ಪನಾ ಕೋಟ್ಯಾನ್, ಸೊಸೆ ಮಂಗಳಾ ಮತ್ತು ಮಂಜುನಾಥ್ ಅವರು ಕರೆದುಕೊಂಡು ಹೋಗಿದ್ದಾರೆ. ಈ ಸಂದರ್ಭ ಪರಿಸರವಾದಿ, ಕಲಾವಿದ ದಿನೇಶ್ ಹೊಳ್ಳ ಜೊತೆಗಿದ್ದರು.

Edited By : Nagaraj Tulugeri
PublicNext

PublicNext

13/05/2022 05:46 pm

Cinque Terre

32.05 K

Cinque Terre

0

ಸಂಬಂಧಿತ ಸುದ್ದಿ