ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡೆಂಘಿ ನಿಯಂತ್ರಣಕ್ಕೆ ಉಚಿತ ಸೊಳ್ಳೆ ಪರದೆ, ಫಾಗಿಂಗ್ ಜಾಗೃತಿ ಕಾರ್ಯಕ್ರಮ

ಬೈಂದೂರು: ಡೆಂಘಿ ಪ್ರಕರಣಗಳು ಹೆಚ್ಚಾಗಿದ್ದ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಸದ್ಯ ಸಮರೋಪಾದಿಯಾಗಿ ನಿವಾರಣಾ ಕಾರ್ಯ ನಡೆಯುತ್ತಿದೆ. ಡೆಂಘಿ ಹೆಚ್ಚಾಗಿರುವ ಪ್ರದೇಶಗಳಿಗೆ ಆರೋಗ್ಯ ಇಲಾಖೆ ನಿತ್ಯ ಭೇಟಿ ನೀಡುವ ಮೂಲಕ ರೋಗ ಮಿತಿ ಮೀರದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಬೈಂದೂರು ತಾಲೂಕು ವ್ಯಾಪ್ತಿಯ ಕೊಲ್ಲೂರು, ಮುದೂರು, ಜಡ್ಕಲ್ ಪ್ರದೇಶಗಳಲ್ಲೇ ಡೆಂಘಿ ಭಾದೆ ಹೆಚ್ಚು.ಈ ಎರಡೂ ಗ್ರಾಮಗಳ ಮನೆಗಳಿಗೆ ಉಚಿತವಾಗಿ ಸೊಳ್ಳೆ ಪರದೆ, ತಲಾ 2 ಬಾಟಲ್ ಡಿಎಂಪಿ ತೈಲ ವಿತರಿಸಲಾಗುತ್ತಿದೆ.

ಇದಲ್ಲದೇ ಇಲ್ಲಿನ ಡೆಂಘಿ ಪೀಡಿತರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ತುರ್ತು ಅಗತ್ಯಕ್ಕಾಗಿ 2 ಆಂಬುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಹಾಗೂ ಗ್ರಾಮದಲ್ಲಿ ಪ್ರತಿನಿತ್ಯ ಫಾಗಿಂಗ್ ಮಾಡಲಾಗುತ್ತಿದೆ. ಬೀದಿ ನಾಟಕ, ಸಾಕ್ಷ್ಯಚಿತ್ರ ಪ್ರದರ್ಶನಗಳ ಮೂಲಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಡೆಂಘಿ ನಿಯಂತ್ರಣ ಕುರಿತು ಮಾಹಿತಿ ನೀಡಿ, ಪೋಷಕರ ಮೂಲಕ ಅನುಷ್ಠಾನ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಲಾಗುತ್ತಿದೆ. ಧಾರ್ಮಿಕ ಕಾರ್ಯಕ್ರಮಗಳು ಮತ್ತು ವಾರದ ಪ್ರಾರ್ಥನೆ ಸಮಯದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ.

ಇದೀಗ ಪ್ರದೇಶಕ್ಕೆ ಅಲ್ಲಿನ ಶಾಸಕ ಸುಕುಮಾರ್ ಶೆಟ್ಟಿ ಮತ್ತು ಮಾಜಿ ಶಾಸಕ ಗೋಪಾಲ್ ಪೂಜಾರಿ ಭೇಟಿ ನೀಡಿ ಅಧಿಕಾರಿ ವರ್ಗವನ್ನು ಚುರುಕುಗೊಳಿಸಿದ್ದಾರೆ.

Edited By :
Kshetra Samachara

Kshetra Samachara

25/05/2022 05:41 pm

Cinque Terre

13.9 K

Cinque Terre

0

ಸಂಬಂಧಿತ ಸುದ್ದಿ