ಉಳ್ಳಾಲ: ಎರಡೂ ಕಿಡ್ನಿ ವಿಫಲಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಇಂದು ಬೆಂಗಳೂರಿಗೆ ತೆರಳುತ್ತಿದ್ದ ಸೇವಂತಿಗುಡ್ಡೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ತೇಜಸ್ವಿನಿ(15) ದಾರಿ ಮಧ್ಯೆ ನೆಲ್ಯಾಡಿಯಲ್ಲಿ ಸಾವನ್ನಪ್ಪಿದ್ದಾಳೆ.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳಾದ ತೇಜಸ್ವಿನಿ ಎರಡೂ ಕಿಡ್ನಿ ಕಳೆದುಕೊಂಡು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ತೇಜಸ್ವಿನಿಗೆ ಡಯಾಲಿಸಿಸ್ ಚಿಕಿತ್ಸೆ ನಡೆಸಲಾಗುತ್ತಿದ್ದು ಆಕೆಗೆ ಬೇರೆ ಕಿಡ್ನಿ ಕಸಿ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರಂತೆ.
ತೀರಾ ಅಶಕ್ತರಾಗಿದ್ದ ಕುಟುಂಬವು ಮಗಳ ಚಿಕಿತ್ಸೆಗಾಗಿ ದಾನಿಗಳಲ್ಲಿ ನೆರವು ಯಾಚಿಸಿತ್ತು. ಕೆಲವು ಹೃದಯ ವೈಶಾಲಿಗಳು ತೇಜಸ್ವಿನಿ ಚಿಕಿತ್ಸೆಗೆ ಸಹಕರಿಸಿದ್ದರು. ಹಾಗಾಗಿ ಇಂದು ತೇಜಸ್ವಿನಿಯನ್ನ ಹೆಚ್ಚಿನ ಚಿಕಿತ್ಸೆಗೆ ಆ್ಯಂಬುಲನ್ಸ್ ನಲ್ಲಿ ಬೆಂಗಳೂರಿಗೆ ಒಯ್ಯುತ್ತಿದ್ದಾಗ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ದಾರಿ ಮಧ್ಯೆ ಉಸಿರು ಚಲ್ಲಿದ್ದಾಳೆ.
Kshetra Samachara
31/05/2022 07:49 pm