ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಾನಸಿಕ ಮತ್ತು ಶಾರೀರಿಕ ಆರೋಗ್ಯಕ್ಕೆ ಯೋಗ ಅತ್ಯಗತ್ಯ:ಪೇಜಾವರ ಶ್ರೀ

ಉಡುಪಿ: ಯೋಗ ಪ್ರಾಚೀನ ಕಾಲದ ಋಷಿ ಮುನಿಗಳಿಂದ ಮಾನವ ಜನಾಂಗಕ್ಕೆ ಸಿಕ್ಕಿರುವ ಹಲವಾರು ಕೊಡುಗೆಗಳಲ್ಲೊಂದು. ಪ್ರಕೃತಿಯ ನಡುವೆ ಸಂಪರ್ಕದಲ್ಲಿದ್ದ ಋಷಿಮುನಿಗಳಿಗೆ ಯೋಗದ ಅಗತ್ಯ ಇರಲಿಲ್ಲ. ಇಂದು ಮಾನವಕುಲ ಪ್ರಕೃತಿಯಿಂದ ದೂರವಾಗಿರುವ ಹೊತ್ತಿನಲ್ಲಿ ಮಾನಸಿಕ ಮತ್ತು ಶಾರೀರಿಕ ಆರೋಗ್ಯಕ್ಕೆ ಯೋಗ ಅತ್ಯಗತ್ಯ. ಅಂತಹ ಯೋಗವನ್ನು ನಾವು ನಮ್ಮ ಜೀವನದಲ್ಲಿ ನಿತ್ಯ ರೂಪಿಸಿಕೊಳ್ಳೋಣ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರು ನಗರಕ್ಕೆ ಬಂದು ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ನಮ್ಮ ನಾಡಿಗೆ ಪ್ರಧಾನಿ ಬಂದದ್ದು ಬಹಳ ಸಂತೋಷದ ಸಂಗತಿ. ಅವರ ಆಗಮನದಿಂದ ಯೋಗದ ಮಹತ್ವ ಹೆಚ್ಚಾಗಿದೆ. ಅವರನ್ನು ಮಠದ ಪರವಾಗಿ ಅಭಿನಂದಿಸುತ್ತೇನೆ. ಜನರಲ್ಲಿ ಯೋಗಾಭ್ಯಾಸದ ಬಗ್ಗೆ ಜಾಗೃತಿ ಹೆಚ್ಚಾಗಿದೆ.

ಎಳೆಯ ಮಕ್ಕಳಲ್ಲೇ ಯೋಗದ ಮಹತ್ವದ ಬಗ್ಗೆ ನಾವು ಅರಿವು ಮೂಡಿಸಬೇಕು. ಆ ಮೂಲಕ ಮಾನವ ಜನಾಂಗ ಉತ್ತಮ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. ಪೇಜಾವರ ಶ್ರೀಗಳು ಮುಂಬೈಯಲ್ಲಿ ಯೋಗದಿನಾಚರಣೆಯಲ್ಲಿ ಪಾಲ್ಗೊಂಡರು.

Edited By : PublicNext Desk
Kshetra Samachara

Kshetra Samachara

21/06/2022 04:37 pm

Cinque Terre

6.84 K

Cinque Terre

1

ಸಂಬಂಧಿತ ಸುದ್ದಿ