ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಮತ್ತು ಸಿಬಂದಿಯ ಬಾಕಿ ವೇತನ ಪಾವತಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳಲ್ಲಿ ಚರ್ಚಿಸಿದ್ದು ಮನವಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ. ಎಡಿಸಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪರಿಶೀಲನ ಸಮಿತಿ ರಚಿಸಿ ಆಸ್ಪತ್ರೆಗೆ ಅವಶ್ಯ ಇರುವ ವೈದ್ಯಾಧಿಕಾರಿ, ಸಿಬಂದಿವರ್ಗ ನೇಮಿಸುವುದು ಹಾಗೂ ಸಿಬಂದಿಗೆ ಬಾಕಿ ಇರುವ ವೇತನ ಪಾವತಿಯ ಬಗ್ಗೆ ವರದಿ ತಯಾರಿಸಲಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
PublicNext
30/06/2022 01:08 pm