ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಹಾರಾಡಿಯ ಡಯಾಲಿಸಿಸ್ ಕೇಂದ್ರಕ್ಕೆ ಐಸಿಯು ಬೆಡ್‌ ಗಳ ಕೊಡುಗೆ

ಬ್ರಹ್ಮಾವರ: ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಇದರ ಸಾಮಾಜಿಕ ಜವಾಬ್ದಾರಿ ಚಟುವಟಿಕೆಯಡಿ ಡಾ.ಎ.ವಿ.ಬಾಳಿಗಾ ಚಾರಿಟೇಬಲ್ ಟ್ರಸ್ಟ್ ನಿರ್ವಹಿಸುತ್ತಿರುವ ಹಾರಾಡಿಯ ಡಯಾಲಿಸಿಸ್ ಕೇಂದ್ರಕ್ಕೆ ಬ್ರಹ್ಮಾವರ ರೋಟರಿ ಕ್ಲಬ್‌ನ ಸುವರ್ಣ ಮಹೋತ್ಸವದ ಯೋಜನೆ ಸಂದರ್ಭದಲ್ಲಿ ಎರಡು ಐಸಿಯು ಬೆಡ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್ ಫಿಸಿಯೋಥೆರಪಿ ಮತ್ತು ಪುನರ್ವಸತಿ ಕೇಂದ್ರ ಫಿಸಿಯೋ ಕೇರ್ ಇದರ ಉದ್ಘಾಟನೆ ಸಂದರ್ಭದಲ್ಲಿ ಉದ್ಯಮಿ ಹಾಗೂ ಸಮಾಜ ಸೇವಕ ಶಶಿಧರ ಶೆಟ್ಟಿ ಐಸಿಯು ಬೆಡ್‌ಗಳನ್ನು ಹಸ್ತಾಂತರಿಸಿದರು. ಈ ವೇಳೆ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮತ್ತು ರೋಟರಿ ಕ್ಲಬ್ ಬ್ರಹ್ಮಾವರ ಸದಸ್ಯರು, ಗಿರೀಜಾ ಗ್ರೂಪ್ ಆಫ್ ಕನ್ಸರ್ನ್ ಮಾಲಕ ರವೀಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/07/2022 09:58 pm

Cinque Terre

3.98 K

Cinque Terre

0

ಸಂಬಂಧಿತ ಸುದ್ದಿ