ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯ 2,58,920 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ: ಡಿ.ಸಿ

ಉಡುಪಿ: ಜಿಲ್ಲೆಯಲ್ಲಿ 1ರಿಂದ 19 ವರ್ಷದೊಳಗಿನ 2,58,920 ಮಕ್ಕಳಿಗೆ ಅಲ್ ಬೆಂಡಾಜೋಲ್‌ ಮಾತ್ರೆಯನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

ಸರಕಾರಿ, ಅನುದಾನಿತ, ಖಾಸಗಿ ಶಾಲೆ, ಅಂಗನವಾಡಿ, ರೆಸಿಡೆನ್ಶಿಯಲ್ ಸ್ಕೂಲ್, ಐಟಿಐ ನರ್ಸಿಂಗ್ ಕಾಲೇಜು, ಪ್ರಥಮ ವರ್ಷದ ಪದವಿ ಹಾಗೂ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಿಗೆ ಆಯಾ ಶಾಲಾ- ಕಾಲೇಜುಗಳಲ್ಲಿ ಮಾತ್ರೆಗಳನ್ನು ನೀಡಲಾಗುವುದು. ಅಂಗನವಾಡಿ ಮಕ್ಕಳಿಗೆ ಹಾಗೂ ಶಾಲೆಯಿಂದ ಮಾತ್ರೆಗಳನ್ನು ಹೊರಗುಳಿದ 19 ವರ್ಷದೊಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ವಿತರಿಸಲು ಆಶಾ ಕಾರ್ಯಕರ್ತೆಯರು ಕ್ರಮ ವಹಿಸಲಿದ್ದಾರೆ.

1 ರಿಂದ 2 ವರ್ಷದೊಳಗಿನ ಮಕ್ಕಳಿಗೆ ಅರ್ಧ ಮಾತ್ರೆ ಹಾಗೂ 2ರಿಂದ 19 ವರ್ಷದೊಳಗಿನವರಿಗೆ ಇಡೀ ಮಾತ್ರೆ ನೀಡಲಾಗುವುದು. ಆ.10 ರಿಂದ ಈ ಬಗ್ಗೆ ರಾಷ್ಟ್ರೀಯ ಅಭಿಯಾನ ಶುರುವಾಗಲಿದೆ.

Edited By : PublicNext Desk
Kshetra Samachara

Kshetra Samachara

09/08/2022 04:28 pm

Cinque Terre

4.35 K

Cinque Terre

0