ಬೈಂದೂರು: ಆಧುನಿಕತೆ ಬೆಳೆದಂತೆಲ್ಲಾ ವೈಯುಕ್ತಿ ನೈರ್ಮಲ್ಯದ ಕಡೆಗೆ ಹೆಚ್ಚು ಜಾಗರೂಕರಾಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೈಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ಡಾ. ರಾಜೇಶ್ ಹೇಳಿದ್ದಾರೆ.
ಅವರು ಸಮುದಾಯ ಅರೋಗ್ಯ ಕೇಂದ್ರ, ಇನ್ನರ್ ವೀಲ್ ಕ್ಲಬ್ ಬೈಂದೂರು, ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಹಯೋಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಬೈಂದೂರಿನ ಜೂನಿಯರ್ ಕಾಲೇಜಿನಲ್ಲಿ ಹೆಣ್ಣು ಮಕ್ಕಳಿಗೆ ಋತು ಚಕ್ರ ನೈರ್ಮಲ್ಯ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು.
ಹೆಣ್ಣುಮಕ್ಕಳು ಅದರಲ್ಲಿಯೂ ಹದಿಹರೆಯದ ಹೆಣ್ಣು ಮಕ್ಕಳಿಗೆ ತಮ್ಮ ಆರೋಗ್ಯದ ಮೇಲೆ ಅತೀ ಹೆಚ್ಚು ನಿಗಾ ವಹಿಸಬೇಕಾಗಿದೆ. ಋತು ಚಕ್ರದ ಬಗ್ಗೆ ಗಾಬರಿಪಡಬೇಕಾದ ಅಗತ್ಯವಿಲ್ಲ. ಈ ಸಂದರ್ಭದಲ್ಲಿ ಸ್ವಚ್ಛತೆಯ ನೈರ್ಮಲ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದರು. ಇದೇ ಸಂದರ್ಭ menstruation cupನ ಸಂಪೂರ್ಣ ವಿವರ, ಅದರ ಉಪಯೋಗದ ಬಗ್ಗೆ ಮಾಹಿತಿ ನೀಡಿದರು. ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಇನ್ನರ್ ವೀಲ್ ಅಧ್ಯಕ್ಷೆ ಶ್ರೀಮತಿ ಬಾನುಮತಿ ಬಿ ಕೆ, ಕಾರ್ಯದರ್ಶಿ ಪಿಂಕಿ ಮೊಬಿ ಕರ್ವೆಲ್ಲೊ, ಸದಸ್ಯೆ ಶಾರದಾ, ಮಕ್ಕಳ ತಜ್ಞೆ ಡಾ. ನಂದಿನಿ, ಜ್ಯೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಪದ್ಮನಾಭ ಮೊದಲಾದವರಿದ್ದರು.
Kshetra Samachara
13/08/2022 04:27 pm