ಮುಲ್ಕಿ:ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವವನ್ನು ಇನ್ನಷ್ಟು ಭದ್ರ ಪಡಿಸಲು ಪ್ರತಿಯೊಬ್ಬ ಮತದಾರರು ಮತದಾನದಲ್ಲಿ ಪಾಲ್ಗೊಳ್ಳಬೇಕೆಂಬ ಸದುದ್ದೇಶದಿಂದ ಆಯೋಜಿಸಿದ ಕಾರ್ಯಕ್ರಮ ಪ್ರಶಂಸನೀಯ ಹಾಗಾಗಿ 18 ವರ್ಷ ಪೂರ್ಣಗೊಂಡ ಯುವಕ ಯುವತಿಯರೆಲ್ಲಾ ಈ ಶಿಬಿರದ ಸದುಪಯೋಗವನ್ನು ಪಡೆಯಬೇಕೆಂದು ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಭಾವನಾಭಿರಾಮ ಉಡುಪ ಹೇಳಿದರು.
ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನವಿಕಾಸ ಸಮಿತಿ ಮುಲ್ಕಿಯ ಸಹಕಾರದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮತದಾರರ ಗುರುತಿನ ಚೀಟಿ ಉಚಿತ ನೋಂದಣಿ ಮತ್ತು ತಿದ್ದುಪಡಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಿನ್ನಿಗೋಳಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ.ಫ್ರಾನ್ಸಿಸ್ ಸೆರಾವೋ, ಭಾಮರೀ ಮಹಿಳಾ ಸಮಾಜದ ಅಧ್ಯಕ್ಷರಾದ ಅನುಷಾ ಕರ್ಕೇರ, ಶ್ರೀ ದೇವಿ ಮಹಿಳಾ ಮಂಡಳಿ ತೋಕೂರಿನ ಅಧ್ಯಕ್ಷೆ ವಿಲಾಸಿನಿ ಮೆಂಡನ್, ಪುನರೂರು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿಯಾದ ಶ್ರೇಯಾ ಪುನರೂರು ಹಾಗೂ ಜನವಿಕಾಸ ಸಮಿತಿ ಮುಲ್ಕಿ ಅಧ್ಯಕ್ಷ ದಾಮೋದರ ಶೆಟ್ಟಿ ಕೊಡೆತ್ತೂರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Kshetra Samachara
15/08/2022 02:41 pm