ಕಾಪು: ದುಷ್ಕರ್ಮಿಗಳ ಕುಕೃತ್ಯಕ್ಕೆ ಬಲಿಯಾದ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿದಿ ವಿಭಾಗದ ಸಹಯೋಗದಲ್ಲಿ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಮನೆ ಆವರಣದ ಸಂಘಮಿತ್ರದಲ್ಲಿ ರಕ್ತದಾನ ಶಿಬಿರ ಮತ್ತು ಅಖಂಡ ಭಜನೆ ನಡೆಯಿತು.
ರಕ್ತದಾನ ಮಾಡಿ ಮಾದರಿಯಾದ ಅಂಧ ಕಿಶೋರ್ ಶೆಟ್ಟಿ ಅವರನ್ನು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಸಮ್ಮಾನಿಸಿದರು, ಕರಾವಳಿ ಅಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಎ. ಸುವರ್ಣ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾದಿಕಾರದ ಸದಸ್ಯೆ ಕೇಸರಿ ಯುವರಾಜ್, ತಾ. ಪಂ. ಮಾಜಿ ಅಧ್ಯಕ್ಷೆ ಶಶಿಪ್ರಭಾ ಎಸ್ ಶೆಟ್ಟಿ, ಮಾಜಿ ಜಿ. ಪಂ. ಸದಸ್ಯರಾದ ಗೀತಾಂಜಲಿ ಎಂ. ಮೊದಲಾದವರು ಉಪಸ್ಥಿತರಿದ್ದರು.
Kshetra Samachara
15/08/2022 07:18 pm