ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಸಮಾಜದಲ್ಲಿ ಶಿಕ್ಷಕರು ಆದರ್ಶ ವ್ಯಕ್ತಿಗಳಾಗಿರಬೇಕು; ಸಚಿವ ಅಂಗಾರ

ಮಣಿಪಾಲ: ಡಾ. ಎಸ್.ರಾಧಾಕೃಷ್ಣನ್ ಅವರು ಸೇರಿದಂತೆ ಹಿರಿಯ ಮಹಾನ್ ವ್ಯಕ್ತಿಗಳ ತತ್ವ ಆದರ್ಶಗಳನ್ನು ಪಾಲನೆ ಮಾಡುವುದರೊಂದಿಗೆ ಶಿಕ್ಷಕರು ಉತ್ತಮ ಕಾರ್ಯ ಸಾಧನೆಗಳನ್ನು ಮಾಡಿ, ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.

ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಡಾ.ಎಸ್.ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಡಾ.ಎಸ್.ರಾಧಾಕೃಷ್ಣನ್, ತಾಂತ್ರಿಕ ಕ್ಷೇತ್ರದಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಅವರು ಸೇರಿದಂತೆ ಮತ್ತಿತರ ಮಹಾನ್ ವ್ಯಕ್ತಿಗಳು ಅಂದಿನ ದಿನಗಳಲ್ಲಿ ಆರ್ಥಿಕ ಸಮಸ್ಯೆಗಳು ಜೊತೆಯಲ್ಲಿ ಅನೇಕ ರೀತಿಯ ವಿರೋಧಗಳು ಇದ್ದರೂ ಸಹ ತಾಳ್ಮೆಯಿಂದ ಅವುಗಳನ್ನು ಗೆದ್ದು ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡುವುದರೊಂದಿಗೆ ಯಶಸ್ಸನ್ನು ಸಾಧಿಸಿದ್ದಾರೆ. ಇದು ಎಲ್ಲಾ ಶಿಕ್ಷಕರಿಗೂ ಸ್ಫೂರ್ತಿದಾಯಕ ಎಂದರು.

ಈ ಸಂದರ್ಭ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲೆಯಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರನ್ನೂ ಸಹ ಸನ್ಮಾನಿಸಿ ಗೌರವಿಸಲಾಯಿತು. ಅಮೃತ ಭಾರತಿಗೆ ಕನ್ನಡದಾರತಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Edited By : Manjunath H D
Kshetra Samachara

Kshetra Samachara

05/09/2022 08:52 pm

Cinque Terre

2.14 K

Cinque Terre

0

ಸಂಬಂಧಿತ ಸುದ್ದಿ