ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು:ವಿಶ್ವ ಹೃದಯ ದಿನದ ಆಚರಣೆ; ಸಾಧಕರಿಗೆ ಗೌರವ

ಕಟೀಲು:ವಿಶ್ವ ಹೃದಯ ದಿನದ ಆಚರಣೆಯು ಕಟೀಲು ದುರ್ಗಾ ಸಂಜೀವನಿ ಆಸ್ಪತ್ರೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಕಟೀಲು ಪರಿಸರದಲ್ಲಿ ಅನೇಕ ಹೃದಯ ಸಂಬಂಧಿ ಕಾಯಿಲೆಗಳನ್ನು ಗುಣಪಡಿಸಿ ಬಡವರ ಕಷ್ಟ ಸುಖಗಳಲ್ಲಿ ಭಾಗಿಯಾಗಿರುವ ಕೆಎಂಸಿ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಪದ್ಮನಾಭ ರವರನ್ನು ಸಾಧಕರ ನೆಲೆಯಲ್ಲಿ ಗೌರವಿಸಲಾಯಿತು.

ಈ ಸಂದರ್ಭ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಧೀಂದ್ರ ಕಾರ್ನಾಡ್, ಡಾ. ನಿತ್ಯಾನಂದ ಚೌಟ, ಜೆಸ್ಸಿ ಸಿಸ್ಟರ್, ತಾರಾನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

30/09/2022 02:58 pm

Cinque Terre

1.56 K

Cinque Terre

0

ಸಂಬಂಧಿತ ಸುದ್ದಿ