ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ವಿಚಾರ ಉಡುಪಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ !

ಉಡುಪಿ : ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ವಿಚಾರವಾಗಿ ಲಿಂಗಾಯತ ಸ್ವಾಮಿಜಿಗಳು ವಿನಯ್ ಕುಲಕರ್ಣಿ ಮನೆಗೆ ಭೇಟಿಯಾಗುತ್ತಿದ್ದಾರೆ ಹಾಗೂ ಸ್ವಾಮೀಜಿಗಳು ಭೇಟಿ ನೀಡಿರುವ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲ್ಲ ನಾನು ರಾಜಕೀಯವಾಗಿ ಮಾತ್ರ ಉತ್ತರ ಕೊಡುತ್ತಿದ್ದೇನೆ ಸ್ವಾಮೀಜಿಗಳಿಗೆ ನಾನು ಏನು ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ.

ಉಡುಪಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ ಹಾಗೂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ವಿಚಾರವಾಗಿ, ಸಿದ್ದರಾಮಯ್ಯ ಡಿಕೆಶಿ ನಡುವೆ ಹಿಂದಿನಿಂದಲೂ ಭಿನ್ನಾಭಿಪ್ರಾಯ ಇದೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಬಯಸಿದ್ದಾರೆ

ಬಹಿರಂಗವಾಗಿ ಸಿಎಂ ಆಗುವ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಕೆಲವು ಶಾಸಕರು ಹೇಳುತ್ತಿದ್ದಾರೆ ಸಿದ್ದರಾಮಯ್ಯ ಡಿಕೆಶಿ ಒಳಗಿಂದೊಳಗೆ ಕತ್ತಿ ಮಸೆಯುತ್ತಿದ್ದಾರೆ.

ಒಬ್ಬರ ಮೇಲೆ ಇನ್ನೊಬ್ಬರು ಯಾವಾಗ ಹೊಡೆಯುತ್ತಾರೆ ಎಂಬುದು ಇನ್ನು ಬಹಿರಂಗವಾಗಬೇಕಷ್ಟೇ ಮತ್ತುಮಸ್ಕಿ ಮತ್ತು ಬಸವಕಲ್ಯಾಣದಲ್ಲಿ ಇನ್ನೂ ಚುನಾವಣೆ ಘೋಷಣೆಯಾಗಿಲ್ಲ ಪಕ್ಷದ ಒಳಗೆ ಅಭ್ಯರ್ಥಿ ಬಗ್ಗೆ ಇನ್ನೂ ಚರ್ಚೆಗಳು ನಡೆದಿಲ್ಲ

ಮಾಧ್ಯಮಗಳಲ್ಲಿ ಮಾತ್ರ ಈ ವಿಚಾರ ಪ್ರಚಾರ ಪಡೆಯುತ್ತಿದೆ .

ವಿಜಯೇಂದ್ರ ತಾನು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕೇಳಿಲ್ಲ ಪಕ್ಷದ ಒಳಗೂ ವಿಜಯೇಂದ್ರ ಹೆಸರು ಚರ್ಚೆಗೆ ಬಂದಿಲ್ಲ

ಮಾಧ್ಯಮಗಳೇ ಚರ್ಚೆ ಮಾಡಿ ಅಭಿಪ್ರಾಯ ಪಡೆಯುತ್ತಿದೆ ಎಂದು ಉಡುಪಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.

Edited By : Manjunath H D
Kshetra Samachara

Kshetra Samachara

06/11/2020 03:38 pm

Cinque Terre

97.65 K

Cinque Terre

3

ಸಂಬಂಧಿತ ಸುದ್ದಿ