ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದಲ್ಲಿರುವ ದೇವರಗುಂಡಿ ಫಾಲ್ಸ್ ನಲ್ಲಿ ಬೆಂಗಳೂರಿನ ಇಬ್ಬರು ಮಾಡೆಲ್ ಗಳು ಅರೆಬೆತ್ತಲೆಯಾಗಿ ಫೋಟೊ ಶೂಟ್ ನಡೆಸಿರುವುದು ಬೆಳಕಿಗೆ ಬಂದಿದ್ದು, ಈ ಕೃತ್ಯಕ್ಕೆ ಸಾರ್ವಜನಿಕರಿಂದ
ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸುಳ್ಯದ ತೋಡಿಕಾನ ಸಮೀಪ ಇರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿರುವ ದೇವರಗುಂಡಿ ಫಾಲ್ಸ್ ನಲ್ಲಿ ಮಾಡೆಲ್ ಗಳಾದ ಬೃಂದಾ ಅರಸ್ ಎಂಬವರು ಫೋಟೊ ಶೂಟ್ ನಡೆಸಿದ್ದಾರೆ. ಈ ಕುರಿತು ಸ್ಥಳೀಯರು ದೇಗುಲದ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಆದರೆ, ನಾವು ಇದಕ್ಕೆ ಅನುಮತಿ ನೀಡಿಲ್ಲ ಎಂದು ಆಡಳಿತ ಮಂಡಳಿಯವರು ಹೇಳಿದ್ದಾರೆ.
Kshetra Samachara
29/10/2020 06:12 pm