ಉಡುಪಿ : ಇಂದ್ರಾಳಿ ಶ್ರೀಧರ್ ಭಟ್(66) ಇವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.ಇವರು ಹಲವಾರು ದೇವಾಲಯಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಇಂದ್ರಾಳಿ ದೇವಸ್ಥಾನದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.
ಇಂದ್ರಾಳಿ ಪರಿಸರದಲ್ಲಿ ಜನಾನುರಾಗಿಯಾಗಿದ್ದು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಇವರು ಪತ್ನಿ, ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.ಭಾರತ್ ಸ್ಕೌಟ್ & ಗೈಡ್ಸ್ ನ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ಇವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
Kshetra Samachara
05/10/2024 03:47 pm