ಮಂಗಳೂರು: ನಗರದ ಕೊಣಾಜೆಯ ಕಂಬಳ ಪದವು ಎಂಬಲ್ಲಿ ರಿಕ್ಷಾವೊಂದು ಅಪಘಾತಕ್ಕೀಡಾಗಿದ್ದು ಐವರು ಗಾಯಗೊಂಡಿದ್ದರು. ಈ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ಶಾಸಕ ಯು.ಟಿ.ಖಾದರ್ ಮಾನವೀಯತೆ ಮೆರೆದು ಗಾಯಾಳುಗಳನ್ನು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ರಿಕ್ಷಾದಲ್ಲಿ ಐವರು ಯುವಕರಿದ್ದು, ಕಾರ್ಯಕ್ರಮವೊಂದಕ್ಕೆ ತೆರಳಿದ್ದ ಅವರು ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಂಬಳಪದವಿನಲ್ಲಿ ರಿಕ್ಷಾ ಅಪಘಾತಕ್ಕೀಡಾಗಿ ಪಲ್ಟಿಯಾಗಿತ್ತು. ಐವರೂ ಗಾಯಗೊಂಡಿದ್ದರು. ಯು.ಟಿ.ಖಾದರ್ ಅವರು ಪುತ್ತೂರಿನಲ್ಲಿ ಕಾರ್ಯಕ್ರಮ ಮುಗಿಸಿ ಉಳ್ಳಾಲಕ್ಕೆ ಬರುತ್ತಿದ್ದ ವೇಳೆ ಇದನ್ನು ಗಮನಿಸಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ, ತಮ್ಮ ಕಾರಿನಲ್ಲಿಯೇ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Kshetra Samachara
12/01/2021 10:36 pm