ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಅಪರಿಚಿತ ವಾಹನ ಡಿಕ್ಕಿ- ತಂದೆ ಸ್ಥಳದಲ್ಲೇ ಸಾವು- ಮಗ ತೀವ್ರ ಗಾಯ

ಕಾಪು: ರಾಷ್ಟ್ರೀಯ ಹೆದ್ದಾರಿ 66 ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಮುಂಭಾಗದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದು ಮಗ ಗಂಭೀರ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮುಂಜಾನೆ ನಡೆದಿದೆ.

ಮೃತರನ್ನು ಬೆಳಗಾವಿ ಮೂಲದ ಪ್ರಭಾಕರ್ ಕೋತ ಎಂದು ಗುರುತಿಸಲಾಗಿದ್ದು, ಅವರ ಮಗ ಸಮರ್ಥ್ (14) ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತ ಪ್ರಭಾಕರ್ ಹಾಗೂ ಅವರ ಮಗ ಸಮರ್ಥ್ ಬೆಳಗಾವಿಯಿಂದ ಮಂಗಳವಾರ ರಾತ್ರಿ ಸರ್ಕಾರಿ ಬಸ್‌ನಲ್ಲಿ ಹೊರಟು ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ಮಗನನ್ನು ದಾಖಲಾತಿ ಮಾಡಲು ಆಗಮಿಸಿದ್ದರು. ಉಚ್ಚಿಲದಲ್ಲಿ ಬಸ್‌ನಿಂದ ಇಳಿದು ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಕಾಪು ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Somashekar
PublicNext

PublicNext

14/09/2022 12:56 pm

Cinque Terre

49.16 K

Cinque Terre

1

ಸಂಬಂಧಿತ ಸುದ್ದಿ