ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾನಸಿಕ ಅಸ್ವಸ್ಥನಿಗೆ ಆಶ್ರಯ ಒದಗಿಸಿದ ಹೊಸಬೆಳಕು ಆಶ್ರಮ

ಉಡುಪಿ: ಹಲವು ತಿಂಗಳುಗಳಿಂದ ಮಣಿಪಾಲದಲ್ಲಿ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ, ಅಪರಿಚಿತ ಮಾನಸಿಕ ಅಸ್ವಸ್ಥನನ್ನು ಅಂಗವಿಕಲರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಹಕಾರದಿಂದ ರಕ್ಷಿಸಿ, ದೊಡ್ಡಣಗುಡ್ಠೆ ಡಾ.ಎ.ವಿ ಬಾಳಿಗ ಆಸ್ಪತ್ರೆಗೆ ದಾಖಲುಪಡಿಸಿ ಮಾನವಿಯತೆ ಮೆರೆದ ಘಟನೆಯು ಕಳೆದ ನ 9ರಂದು ನಡೆದಿತ್ತು.

ಇದೀಗ ಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಮಣಿಪಾಲ ಹೊಸಬೆಳಕು ಆಶ್ರಮದಲ್ಲಿ ನೆಲೆ ಕಲ್ಪಿಸಲಾಗಿದೆ.

ಈ ಮಾನವೀಯ ಕಾರ್ಯದಲ್ಲಿ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಕಲ್ಯಾಣಾಧಿಕಾರಿ ಶ್ರೀಮತಿ ರತ್ನ ಯತೀಶ್, ಸಿಬ್ಬಂದಿ ಶಶಿ, ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು, ವಿನಯಚಂದ್ರ ಸಾಸ್ತಾನ, ರೋಶನ್ ಲೂವಿಸ್, ಬಾಳಿಗ ಆಸ್ಪತ್ರೆಯ ಮೇಲ್ವಿಚಾರಕಿ ಸೌಜನ್ಯ ಶೆಟ್ಟಿ ಕೈಜೋಡಿಸಿದರು.

Edited By : Nagaraj Tulugeri
Kshetra Samachara

Kshetra Samachara

19/11/2020 05:32 pm

Cinque Terre

12.43 K

Cinque Terre

0