ಉಡುಪಿ: ಕಾಲಿಲ್ಲದಿದ್ದರೂ ಈ ಯುವತಿಯ ಕಲ್ಯಾಣಕ್ಕೆ ಕಾಲ ಕೂಡಿ ಬಂದಿದೆ.
ಕಾಲುಗಳೆರಡೂ ಬಲಹೀನವಾದರೂ, ಈ ಯುವತಿಯ ಅದೃಷ್ಟಬಲ ಮಾತ್ರ ದೃಢವಾಗಿತ್ತು. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಯುವಕ ತಾನೇ ಮುಂದೆ ಬಂದು ಇವಳ ಬಾಳಿಗೆ ಬೆಳಕಾಗಿದ್ದಾನೆ.
ಪೋಲಿಯೊಗೆ ತುತ್ತಾಗಿ ಎರಡೂ ಕಾಲುಗಳಲ್ಲಿ ಈಕೆ ಬಲ ಕಳೆದುಕೊಂಡಿದ್ದಾಳೆ. ಪಿಯುಸಿ ವರೆಗೆ ಓದಿ, ತಂದೆ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡ ನಿರಾಧಾರವಾಗುತ್ತೆ ಎಂದು ಖಿನ್ನತೆಗೆ ಜಾರಿದ್ದಳು. ಆದರೆ, ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಈಕೆಯ ಭಾಗ್ಯದ ಬಾಗಿಲು ತೆರೆದಿದ್ದಾರೆ.
ದುಬೈ ನ ಆಯಿಲ್ ಕಂಪೆನಿಯಲ್ಲಿ ಉದ್ಯೋಗ ಮಾಡುವ ಸಂದೀಪ್, ಈಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ. ಮನೆಯವರ ಒಪ್ಪಿಗೆಯಂತೆ ಇಂದು ಈ ಅಪರೂಪದ ಮದುವೆಗೆ ಉಡುಪಿಯ ಕಂಬಳ್ಳಿ ದೇವಸ್ಥಾನ ಸಾಕ್ಷಿಯಾಯ್ತು.
Kshetra Samachara
23/11/2020 10:41 pm