ಧರ್ಮಸ್ಥಳ: ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯಾದ್ಯಂತ ವಾತ್ಸಲ್ಯ ಸಹಾಯಹಸ್ತ ವಿತರಣೆ ಕಾರ್ಯಕ್ರಮಕ್ಕೆ ಧರ್ಮಸ್ಥಳದಲ್ಲಿ ಚಾಲನೆ ನೀಡಲಾಯಿತು.
ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಸಹಾಯಹಸ್ತ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ.ಹೆಗ್ಗಡೆ ಕಾರ್ಯಕ್ರಮ ಉದ್ಘಾಟಿಸಿದರು.
ಯೋಜನೆಯ ವತಿಯಿಂದ ಧರ್ಮಾಧಿಕಾರಿಗಳಿಗೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗೌರವ ಸಮರ್ಪಿಸಲಾಯಿತು. ಇದೇ ವೇಳೆ ಹಲವು ಕ್ಷೇತ್ರದ ಗಣ್ಯರು ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಅರ್ಪಿಸಿದರು.
ಈ ಸಂದರ್ಭ ಮೂಲ ಸೌಕರ್ಯಗಳನ್ನೊಳಗೊಂಡ 7300 ಕಿಟ್ ಗಳನ್ನು ಒಳಗೊಂಡ ಟ್ರಕ್ ಗಳಿಗೆ ಚಾಲನೆ ನೀಡಲಾಯಿತು.
Kshetra Samachara
25/11/2020 05:54 pm