ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೀನುಗಾರರ ಮೃತದೇಹಗಳ ಅಂತಿಮ ದರ್ಶನ ಪಡೆದರು.
ಬಳಿಕ ಮಾತನಾಡಿದ ಸಚಿವರು, ಮೃತರ ಕುಟುಂಬಗಳಿಗೆ ನಾಳೆ ಸಂಜೆಯೇ ಪರಿಹಾರ ನೀಡುವ ಭರವಸೆ ನೀಡಿದರು.
ಅಲ್ಲದೆ, ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲು ತನಿಖಾ ತಂಡ ರಚಿಸಿದ್ದಾಗಿ ತಿಳಿಸಿದರು.
ಸಚಿವರ ಜೊತೆ ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ಇದ್ದರು.
Kshetra Samachara
02/12/2020 03:18 pm