ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನ ತೆಗೆಸಿದ ಶಿಕ್ಷಕರು, ಆಕ್ರೋಶ ವ್ಯಕ್ತಪಡಿಸಿದ ಪೋಷಕರು...

ಪುತ್ತೂರು: ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನವನ್ನು ಶಾಲೆಯಲ್ಲಿ ಬಿಚ್ಚಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳ ಪೋಷಕರು, ಸಂಘಟನೆಯ ಕಾರ್ಯಕರ್ತರು ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಪುತ್ತೂರು ತಾಲೂಕಿನ ಪಾಪೆ ಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 19 ರಂದು ನಡೆದಿದೆ. ಈ ಸಂಬಂಧ ಪೋಷಕರು ಶಾಲಾ ಮುಖ್ಯೋಪಾಧ್ಯಾಯರ ಜೊತೆ ಮಾತುಕತೆ ನಡೆಸಿ ಮತ್ತೆ ಮಕ್ಕಳ ಕೈಗೆ ರಕ್ಷಾಬಂಧನವನ್ನು ಕಟ್ಟಿಸಿದ್ದು, ಪ್ರಕರಣವು ಸುಖಾಂತ್ಯ ಕಂಡಿದೆ.

ಪಾಪೆಮಜಲು ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಕೈಯಲ್ಲಿದ್ದ ರಕ್ಷಾಬಂಧನವನ್ನು ಬಿಚ್ಚುವಂತೆ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ತಿಳಿಸಿದ್ದು, ಈ ಬಗ್ಗೆ ಅರಿತ ಮಕ್ಕಳ ಪೋಷಕರು ಶಾಲೆಗೆ ಬಂದು ಮುಖ್ಯೋಪಾಧ್ಯಾಯರಾದ ತೆರೇಜ್ ಎಂ ಸಿಕ್ವೇರಾ ಮತ್ತು ಶಿಕ್ಷಕರ ಜೊತೆ ಮಾತುಕತೆ ನಡೆಸಿದರು.

ಈ ವೇಳೆ ಶಾಲಾ ಮುಖ್ಯೋಪಾಧ್ಯಾಯರು ಮಾತನಾಡಿ, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅದನ್ನು ಬಿಚ್ಚುವಂತೆ ಹೇಳಿದ್ದೆ ಹೊರತು ಬೇರೆ ಯಾವ ವಿಧದಿಂದಲೂ ಅಲ್ಲ, ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನವು ತುಂಬಾ ಕಪ್ಪಾಗಿದ್ದು, ಈ ಹಿನ್ನೆಲೆ ಮಕ್ಕಳ ಆರೋಗ್ಯ ಕಾಳಜಿಯಿಂದಾಗಿ ಅದನ್ನು ಬಿಚ್ಚಿಡುವಂತೆ ಹೇಳಿದ್ದಾಗಿ ಹೇಳಿದರು.

Edited By : Somashekar
Kshetra Samachara

Kshetra Samachara

19/09/2022 07:11 pm

Cinque Terre

5.62 K

Cinque Terre

0

ಸಂಬಂಧಿತ ಸುದ್ದಿ