ಸುರತ್ಕಲ್: ದ.ಕ. ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ ಮುಂಗಟ್ಟು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಈ ಆದೇಶ ಆಗಸ್ಟ್ 1ರ ಬೆಳಗ್ಗೆ 6 ಗಂಟೆವರೆಗೆ ಚಾಲ್ತಿಯಲ್ಲಿರುತ್ತದೆ. ತುರ್ತು ಸೇವೆ, ಆಸ್ಪತ್ರೆ, ಮೆಡಿಕಲ್ ಹೊರತು ಪಡಿಸಿ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಮಾಡುವಂತೆ, ಅನಗತ್ಯ ಯಾರೂ ಓಡಾಟ ನಡೆಸದಂತೆ ಜಿಲ್ಲಾಧಿಕಾರಿ ಕಟ್ಟಪ್ಪಣೆ ಮಾಡಿದ್ದಾರೆ. ಇದು ನೈಟ್ ಕರ್ಫ್ಯೂ ಅಲ್ಲ, ಬದಲಾಗಿ ಜನರ ಓಡಾಟವನ್ನು ಕಡಿಮೆ ಮಾಡಿ, ಪೊಲೀಸರಿಗೆ ಶಾಂತಿ ಸುವ್ಯವಸ್ಥೆ ಕಾಪಾಡಲು ಅನುವು ಆಗುವಂತೆ ಈ ಆದೇಶವನ್ನು ಜಾರಿಗೊಳಿಸಲಾಗಿದೆ.
ಗುಪ್ತಚರ ಇಲಾಖೆಯ ಪ್ರಕಾರ ಮುಂದಿನ ಮೂರು ದಿನಗಳ ವರೆಗೆ ಕಠಿಣ ಪರಿಸ್ಥಿತಿ ಇದೆ. ಆದ್ದರಿಂದ ಮುನ್ನೆಚ್ಚರಿಕೆ ದೃಷ್ಟಿಯಿಂದ ರಾತ್ರಿ ಜನಸಂಚಾರಕ್ಕೆ ಕಡಿವಾಣ ಹಾಕಲಾಗಿದೆ. ಅಲ್ಲದೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ದೃಷ್ಟಿಯಿಂದ ಮುಂದಿನ ಎರಡು ದಿನಗಳ ಕಾಲ ಇಂದಿನಿಂದ ಬಾರ್ ಹಾಗೂ ವೈನ್ ಶಾಪ್ ಗಳನ್ನು ಇಡೀ ಜಿಲ್ಲೆಯಾದ್ಯಂತ ಬಂದ್ ಮಾಡಲು ಚಿಂತನೆ ನಡೆಸಲಾಗಿದೆ. ಅಲ್ಲದೆ, ಸಿನಿಮಾ ಮಂದಿರಗಳನ್ನು ರಾತ್ರಿ ವೇಳೆ ಮುಚ್ಚುವಂತೆ ಸೂಚನೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಹೇಳಿದ್ದಾರೆ.
Kshetra Samachara
29/07/2022 07:34 pm