ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣೆ; ಅವರೇ ನೆಟ್ಟ ಸಸಿಗಳಿಗೆ ಕಟ್ಟೆ ಕಟ್ಟಿ ಲೋಕಾರ್ಪಣೆ

ಉಡುಪಿ: ಇಂದು ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪ್ರಥಮ ಪುಣ್ಯತಿಥಿ. ಬೆಂಗಳೂರಿನ ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀಗಳ ಶಿಲಾ ವೃಂದಾವನ ಪ್ರತಿಷ್ಠಾ ಪೂರ್ವಕ ಆರಾಧನೋತ್ಸವ ನಡೆದರೆ ಉಡುಪಿಯೂ ಸೇರಿದಂತೆ ದೇಶದ ವಿವಿಧೆಡೆ ಇರುವ ಪೇಜಾವರ ಮಠದ ಶಾಖೆಗಳಲ್ಲೂ ಶ್ರೀಗಳ ಸಂಸ್ಮರಣೋತ್ಸವ ನಡೆಯಿತು.

ಉಡುಪಿಯಲ್ಲಿ ಶ್ರೀಗಳ ಸಂಸ್ಮರಣೆಯ ವಿಶೇಷ ಕಾರ್ಯಕ್ರಮವೊಂದು ನಡೆಯಿತು. ಸ್ಥಳೀಯ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನ, ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ, ಪಾಜಕದ ಆನಂದತೀರ್ಥ ವಿದ್ಯಾಲಯಗಳಲ್ಲಿ ಶ್ರೀ ವಿಶ್ವೇಶತೀರ್ಥರು ನಾನಾ ಸಂದರ್ಭ ಭೇಟಿ ನೀಡಿದಾಗ ಸಸಿಗಳನ್ನು ನೆಟ್ಟಿದ್ದು, ಈಗ ಅದು ಸೊಂಪಾಗಿ ಬೆಳೆದು ನಿಂತಿವೆ. ಇವುಗಳಿಗೆ ಸುಂದರವಾಗಿ ಕಟ್ಟೆಗಳನ್ನು ಕಟ್ಟಿ ಪುಷ್ಪಾಲಂಕಾರ ಮಾಡಿ ಲೋಕಾರ್ಪಣೆಗೊಳಿಸಿ ಸಂಸ್ಮರಣೆ ಮಾಡಲಾಯಿತು. ಮುಚ್ಲುಕೋಡು ದೇವಳದ ಆವರಣದಲ್ಲಿ ಶ್ರೀಗಳು ತಮ್ಮ 80ನೇ ಜನ್ಮ ವರ್ಧಂತಿ ಕಾರ್ಯಕ್ರಮದ ಸಂದರ್ಭ 10/12/2010 ರಂದು ಸುಬ್ರಹ್ಮಣ್ಯ ಷಷ್ಠಿ ಪರ್ವದಿನದಂದು ಶ್ರೀ ವಿಶ್ವೇಶತೀರ್ಥ ಮೂಲಿಕಾ ವನ ನಿರ್ಮಾಣಕ್ಕೆ ನಾಗಕೇಸರ ಸಸಿ ನೆಟ್ಟು ಚಾಲನೆ ನೀಡಿದ್ದರು. ಅದು ಈಗ ಸಮೃದ್ಧವಾಗಿ ಬೆಳೆದಿದೆ ಮಾತ್ರವಲ್ಲ, ಅಲ್ಲಿ 80 ವಿವಿಧ ವನಸ್ಪತಿಗಳ ಸುಂದರ ಪುಟ್ಟ ವನ ಬೆಳೆದು ನಿಂತಿದೆ. ಪರಿಸರ, ಪ್ರಕೃತಿ ಬಗ್ಗೆ ಅನನ್ಯ ಪ್ರೀತಿ ಹೊಂದಿದ್ದ ಶ್ರೀಗಳ ಸ್ಮರಣಾರ್ಥ ಈ ಸಸಿಗಳನ್ನು ಚೆನ್ನಾಗಿ ಪೋಷಿಸುವ ಸಂಕಲ್ಪ ಮಾಡಲಾಗಿದೆ. ಈ ಕಟ್ಟೆಗಳ ಮೇಲೆ ಶ್ರೀಗಳ ಹೆಸರು, ನೆಟ್ಟ ದಿನಾಂಕವನ್ನು ಶಿಲಾಫಲಕದಲ್ಲಿ ನಮೂದಿಸಲಾಗುತ್ತದೆ ಎಂದು ಸಂಯೋಜಕ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

17/12/2020 09:13 pm

Cinque Terre

26.7 K

Cinque Terre

1

ಸಂಬಂಧಿತ ಸುದ್ದಿ