ಸುಬ್ರಹ್ಮಣ್ಯ: ಕೋಮುದ್ವೇಷದಿಂದ ಹತ್ಯೆಗಳು ನಡೆದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಅನ್ಯ ಧರ್ಮದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಿದ್ದಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಹೌದು. ದಕ್ಷಿಣ ಕನ್ನಡ ಸುಳ್ಯ ತಾಲ್ಲೂಕಿನ ಹರಿಹರ ಪಲ್ಲತ್ತಡ್ಕ ಎಂಬಲ್ಲಿ ಸೇತುವೆ ಮೇಲೆ ಇದ್ದ ಮರಗಳನ್ನು ಜೆಸಿಬಿಯಲ್ಲಿ ತೆರವುಗೊಳಿಸುತ್ತಿದ್ದ ಸಂದರ್ಭದಲ್ಲಿ ಜೆಸಿಬಿ ಆಪರೇಟರ್ ಶರೀಫ್ ನಿಯಂತ್ರಣ ತಪ್ಪಿ ನದಿಗೆ ಬಿದ್ದರು. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಸೋಮಶೇಖರ್ ಕಟ್ಟೆಮನೆ ಎಂಬವರು ತಕ್ಷಣ ನದಿಗೆ ಹಾರಿ ಶರೀಫ್‌ನನ್ನು ರಕ್ಷಿಸಿದ್ದಾರೆ. ಇವರ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
PublicNext
03/08/2022 11:16 am