ಉಡುಪಿ: ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಸಂಗೀತ ಲೋಕದ ಮೇರು ದಿಗ್ಗಜ.
"ಎದೆ ತುಂಬಿ ಹಾಡುವೆನು" ಮೂಲಕ ಜಗತ್ತಿನ ಮನ ಗೆದ್ದಿದ್ದರು. ಸ್ವರ ಸಾಮ್ರಾಟ ಬಾಲಸುಬ್ರಹ್ಮಣ್ಯಂ ಇಹಲೋಕ ತ್ಯಜಿಸಿದ್ದಾರೆ ಎಂಬ ಸುದ್ದಿ ಕೇಳಿ ಅತೀವ ದುಃಖವಾಯ್ತು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ.
ಎಸ್ ಪಿಬಿ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ. ಅವರು ಮತ್ತೆ ಹುಟ್ಟಿ ಬರಲಿ ಎಂದು ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.
Kshetra Samachara
25/09/2020 05:58 pm